Webdunia - Bharat's app for daily news and videos

Install App

45 ಮಹಿಳೆಯರ ಮೇಲೆ ಅತ್ಯಾಚಾರ : ಪ್ರಿನ್ಸಿಪಾಲ್ ಅರೆಸ್ಟ್

Webdunia
ಗುರುವಾರ, 7 ಸೆಪ್ಟಂಬರ್ 2023 (08:56 IST)
ಇಸ್ಲಾಮಾಬಾದ್ : 45ಕ್ಕೂ ಹೆಚ್ಚು ಮಹಿಳೆಯರನ್ನು ಅತ್ಯಾಚಾರವೆಸಗಿ, ವೀಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಕರಾಚಿಯ  ಖಾಸಗಿ ಶಾಲೆಯ ಪ್ರಾಂಶುಪಾಲನೊಬ್ಬನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿ ಪ್ರಿನ್ಸಿಪಾಲ್ ಇರ್ಫಾನ್ ಗಫೂರ್ ಎಂದು ಗುರುತಿಸಲಾಗಿದೆ. ಆತನ ಮೊಬೈಲ್ನಿಂದ ಸುಮಾರು 25 ಸಣ್ಣ ವೀಡಿಯೋ ತುಣುಕುಗಳನ್ನು ವಶಪಡಿಸಿಕೊಂಡಿದ್ದಾರೆ. ತನಿಖೆಗಾಗಿ ಪೊಲೀಸರು ಸಿಸಿಟಿವಿಯ ಡಿವಿಆರ್ ಅನ್ನು ಪರಿಶೀಲಿಸುತ್ತಿದ್ದಾರೆ.

ಇರ್ಫಾನ್ ಮತ್ತು ಶಾಲೆಯ ಶಿಕ್ಷಕಿಯ ವೀಡಿಯೋ ವೈರಲ್ ಆದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಆತನನ್ನು ಬಂಧಿಸಿದ್ದಾರೆ. ಅಲ್ಲದೇ ಶಾಲೆಯನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಲೈಂಗಿಕ ಕಿರುಕುಳ, ಬೆದರಿಕೆ ಮತ್ತು ಬ್ಲ್ಯಾಕ್ಮೇಲ್ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಉದ್ಯೋಗ ನೀಡುವ ನೆಪದಲ್ಲಿ ಆರೋಪಿ ಶಿಕ್ಷಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅಲ್ಲದೇ ವೀಡಿಯೋ ಚಿತ್ರೀಕರಿಸುವ ಮೂಲಕ ಮಹಿಳೆಯರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ. ತನಿಖೆ ಪ್ರಗತಿಯಲ್ಲಿದ್ದು, ವೀಡಿಯೋ ಹೊಂದಿರುವವರನ್ನು ಬಂಧಿಸಲಾಗುವುದು ಎಂದು ತನಿಖಾಧಿಕಾರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ