ಇಸ್ಲಾಮಾಬಾದ್: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪಾಕ್ ಸರ್ಕಾರ ವಿಶೇಷ ಕಾನೂನೊಂದನ್ನು ಜಾರಿಗೆ ತರಲು ಮುಂದಾಗಿದೆ.
ಒಂದಕ್ಕಿಂತ ಹೆಚ್ಚು ಬಾರಿ ಅತ್ಯಾಚಾರ ಮಾಡಿದ ಆರೋಪಿಗಳಿಗೆ ಶಾಶ್ವತವಾಗಿ ನಪುಂಸಕತ್ವ ಶಿಕ್ಷೆ ವಿಧಿಸುವ ಕಾನೂನೊಂದನ್ನು ಜಾರಿಗೊಳಿಸಲು ಪಾಕ್ ಸಂಸತ್ ಒಪ್ಪಿಗೆ ನೀಡಿದೆ.
ಇತ್ತೀಚೆಗೆ ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂತಹದ್ದೊಂದು ಕಾನೂನು ಜಾರಿಗೆ ತರಲು ಸಾರ್ವಜನಿಕರಿಂದಲೂ ಆಗ್ರಹ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಪಾಕ್ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.