ಇಸ್ಲಾಮಾಬಾದ್ : ಭ್ರಷ್ಟಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ (70) ಅವರ ಬಂಧನ ಕಾನೂನು ಬಾಹಿರವಾಗಿದೆ.
ಅವರನ್ನೂ ತಕ್ಷಣ ಬಿಡುಗಡೆ ಮಾಡಬೇಕು ಎಂದು ಪಾಕ್ನ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ. ಬಂಧನವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಉಮರ್ ಅತಾ ಬಂಡಿಯಾಲ್, ನ್ಯಾಯಮೂರ್ತಿ ಮುಹಮ್ಮದ್ ಅಲಿ ಮಜರ್ ಮತ್ತು ಅಥರ್ ಮಿನಲ್ಲಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.
ಹೈಕೋರ್ಟ್ಗೆ ಹಾಜರಾಗಲು ಬಂದಿದ್ದ ವೇಳೆ, ಕೋರ್ಟ್ ಆವರಣದಲ್ಲಿಯೇ ಅವರನ್ನು ಬಂಧಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ಛೀಮಾರಿ ಹಾಕಿದೆ.