ಕೀವ್ : ಕಳೆದ ವಾರ ರಷ್ಯಾ ಪಡೆಯಿಂದ ಕಿಡ್ನಾಪ್ ಆಗಿದ್ದ ಉಕ್ರೇನ್ನ ಮೆಲಿಟೊಪೋಲ್ನ ಮೇಯರ್ ಇವಾನ್ ಫೆಡೋರೊವ್ ಅವರು ಬಿಡುಗಡೆಗೊಂಡಿದ್ದಾರೆ.
ಈ ಬಗ್ಗೆ ಉಕ್ರೇನ್ನ ರಕ್ಷಣಾ ಸಚಿವಾಲಯ ಅಧಿಕೃತವಾದ ಮಾಹಿತಿ ಹಂಚಿಕೊಂಡಿದ್ದು, ಅಧ್ಯಕ್ಷ ವೊಲೊಡಿಮಿರ್ ಝೆಲೇನ್ಸ್ಕಿ ಅವರು ಮೆಲಿಟೊಪೋಲ್ನ ಮೇಯರ್ನೊಂದಿಗೆ ಮಾತನಾಡುತ್ತಿರುವ ತುಣುಕನ್ನು ಬಿಡುಗಡೆ ಮಾಡಿದೆ.
ಈ ವೀಡಿಯೋದಲ್ಲಿ ಮೇಯರ್ ಅವರು ಝೆಲೆನ್ಸ್ಕಿಗೆ ಧನ್ಯವಾದ ತಿಳಿಸುತ್ತಾರೆ. ಅದಕ್ಕೆ ಪ್ರತಿಕ್ರಿಯಿಸಿದ ಝೆಲೆನ್ಸ್ಕಿ ನಾವು ನಮ್ಮವರನ್ನು ಬಿಟ್ಟುಕೊಡುವುದಿಲ್ಲ ಎಂದು ಉತ್ತರಿಸಿದ್ದಾರೆ.
ಮೇಯರ್ನ್ನು ಬಿಡುಗಡೆಗೊಳಿಸಲು ಉಕ್ರೇನ್ ರಷ್ಯಾದ 9 ಸೈನಿಕರನ್ನು ಹಸ್ತಾಂತರಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.