Select Your Language

Notifications

webdunia
webdunia
webdunia
webdunia

ಅಮೆರಿಕಾದಲ್ಲಿ ರಾಹುಲ್ ಗಾಂಧಿ ಮತ್ತೊಂದು ಎಡವಟ್ಟು: ಮೀಸಲಾತಿ ಬಗ್ಗೆ ವಿವಾದ

Rahul Gandhi

Krishnaveni K

ವಾಷಿಂಗ್ಟನ್ , ಬುಧವಾರ, 11 ಸೆಪ್ಟಂಬರ್ 2024 (09:41 IST)
Photo Credit: Facebook
ವಾಷಿಂಗ್ಟನ್: ಅಮೆರಿಕಾ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೀಸಲಾತಿ ಬಗ್ಗೆ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಅವರ ಹೇಳಿಕೆಗೆ ಬಿಜೆಪಿ ಮತ್ತು ಹಿಂದುಳಿದ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ.

ವಾಷಿಂಗ್ಟನ್ ನಲ್ಲಿ ಜಾರ್ಜ್ ಟೌನ್ ವಿಶ್ವವಿದ್ಯಾಲಯದಲ್ಲಿ ಭಾರತೀಯರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಮೀಸಲಾತಿ ಯಾವಾಗ ಕೊನೆಯಾಗುತ್ತದೆ ಎಂದು ಅವರಿಗೆ ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು ದೇಶದಲ್ಲಿ ಸಮಾನತೆ ಬಂದಾಗ ಮೀಸಲು ಅಂತ್ಯವಾಗಲಿದೆ ಎಂದರು.

ದೇಶದಲ್ಲಿ ಇನ್ನೂ ಎಲ್ಲರೂ ಸಮಾನರು ಎಂಬ ಕಾಲ ಬಂದಿಲ್ಲ. ಅಂಥ ಸಂದರ್ಭ ಬಂದಾಗ ಮೀಸಲಾತಿ ರದ್ದು ಮಾಡುವ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಲಿದೆ ಎಂದು ರಾಹುಲ್ ಹೇಳಿದ್ದಾರೆ. ರಾಹುಲ್ ಹೇಳಿಕೆಗೆ ಬಿಜೆಪಿ, ಬಿಎಸ್ ಪಿ, ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಹಿಂದುಳಿದ ವರ್ಗದವರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ಶೇ.90 ಮಂದಿ ಬುಡಕಟ್ಟು ಜನಾಂಗ, ದಲಿತರು, ಆದಿವಾಸಿಗಳನ್ನು ಪ್ರತಿನಿಧಿಸುವವರು ಯಾರೂ ಇಲ್ಲ. ಹೀಗಾಗಿಯೇ ಭಾರತದಲ್ಲಿ ಜಾತಿಗಣತಿ ನಡೆಸಲು ನಾವು ಆಗ್ರಹಿಸುತ್ತೇವೆ. ಇದಕ್ಕೆ ಜನರ ಸಹಮತವೂ ಇದೆ. ಆ ಮೂಲಕ ಭಾರತದ ಸಾಮಾಜಿಕ ಸ್ಥಿತಿಯನ್ನು ನಾವು ಅರಿಯುತ್ತೇವೆ. ಸಮಾಜದಲ್ಲಿ ಸಮಾನತೆ ಬಂದಾಗ ಮೀಸಲಾತಿ ರದ್ದು ಮಾಡಬಹುದು’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ನವರ ನಾಟಕ ಬಯಲಾಗಿದೆ. ಇದೇ ವಿಷಯವನ್ನು ಇಟ್ಟುಕೊಂಡ ಕಾಂಗ್ರೆಸ್ ಅಧಿಕಾರಕ್ಕೇರಲು ಪ್ರಯತ್ನಿಸುತ್ತಿದೆ ಎಂದು ಬಿಎಸ್ ಪಿ ನಾಯಕಿ ಮಾಯಾವತಿ ಹೇಳಿದ್ದಾರೆ. ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಇದು ಕಾಂಗ್ರೆಸ್ ನ ಮನಸ್ಥಿತಿ. ಮೀಸಲಾತಿಯನ್ನು ಅಂತ್ಯಗೊಳಿಸುವುದು ಸಹ ಅಪರಾಧ ಎಂದು ಎಲ್ ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಕಿಡಿ ಕಾರಿದ್ದಾರೆ. ಪ್ರತೀ ಬಾರಿ ವಿದೇಶಕ್ಕೆ ಹೋದಾಗಲೂ ಅಲ್ಲಿ ಭಾರತವನ್ನು ಅವಮಾನಿಸುವ ಕೆಲಸವನ್ನು ರಾಹುಲ್ ಮಾಡುತ್ತಿದ್ದಾರೆ. ಇದು ರಾಷ್ಟ್ರವಿರೋಧಿ ಕೃತ್ಯ ಎಂದು ಬಿಜೆಪಿ ಟೀಕಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೃಷಿ ಸಚಿವರ ಆಪ್ತ ಕಾರ್ಯದರ್ಶಿಯಿಂದ ಹಿಂಸೆ ಆರೋಪ: ವಿಡಿಯೊ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ