Select Your Language

Notifications

webdunia
webdunia
webdunia
webdunia

ಸೌದಿ ಅರೇಬಿಯಾ ಪಾಲಾದ ರೊನಾಲ್ಡೊ

ಸೌದಿ ಅರೇಬಿಯಾ ಪಾಲಾದ ರೊನಾಲ್ಡೊ
ದುಬೈ , ಶನಿವಾರ, 31 ಡಿಸೆಂಬರ್ 2022 (11:30 IST)
ದುಬೈ : ಪೋರ್ಚುಗಲ್ ಫುಟ್ಬಾಲ್  ತಂಡದ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ ಸೌದಿ ಅರೇಬಿಯಾದ ಅಲ್-ನಸ್ ಕ್ಲಬ್ ಪರ ಮುಂದಿನ ಎರಡೂವರೆ ವರ್ಷಗಳ ಅವಧಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಆದ್ದರಿಂದ ರೊನಾಲ್ಡೊ ಮ್ಯಾಂಚೆಸ್ಟರ್ ಯುನೈಟೆಡ್ ತಂಡವನ್ನು ತೊರೆದಿದ್ದಾರೆ. ಐದು ಬಾರಿ ಬ್ಯಾಲನ್ ಡಿವೋ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದ ರೊನಾಲ್ಡೊ 2022ರ ಫಿಫಾ ವಿಶ್ವಕಪ್ನಲ್ಲಿ ಸೋತು ಹೊರನಡೆದಿದ್ದರು. ಈದೀಗ 2025ರ ವರೆಗೆ ಕ್ಲಬ್ ಪರ ಆಡಲು ಒಪ್ಪಿಕೊಂಡಿದ್ದಾರೆ ಎಂದು ಸೌದಿ ಕ್ಲಬ್ ಹೇಳಿಕೆ ನೀಡಿದೆ.

ಆದ್ರೆ ಹಣಕಾಸು ವ್ಯವಹಾರವನ್ನು ಬಹಿರಂಗಪಡಿಸಿಲ್ಲ. ಆದ್ರೆ ರೊನಾಲ್ಡೊನೊಂದಿಗೆ 200 ಮಿಲಿಯನ್ ಯುರೋಗಿಂತಲೂ ಅಧಿಕ ಮೌಲ್ಯದ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

 


Share this Story:

Follow Webdunia kannada

ಮುಂದಿನ ಸುದ್ದಿ

ರೂಪಾಂತರಿ ಆತಂಕ ಹಿನ್ನೆಲೆ ಸ್ಟ್ರಿಕ್ಟ್ ರೂಲ್ಸ್!