Select Your Language

Notifications

webdunia
webdunia
webdunia
Sunday, 30 March 2025
webdunia

ಉಕ್ರೇನ್ ಅಣುಸ್ಥಾವರದ ಮೇಲೆ ರಷ್ಯಾ ದಾಳಿ!

ಉಕ್ರೇನ್ ಅಣುಸ್ಥಾವರದ ಮೇಲೆ ರಷ್ಯಾ ದಾಳಿ!
ನವದೆಹಲಿ , ಶುಕ್ರವಾರ, 4 ಮಾರ್ಚ್ 2022 (09:44 IST)
ಕೀವ್ : ರಷ್ಯಾ ಹಾಗೂ ಉಕ್ರೇನ್ ನಡುವಿನ ಸಂಘರ್ಷ 9ನೇ ದಿನಕ್ಕೆ ಕಾಲಿಟ್ಟಿದೆ. ಇದೀಗ ರಷ್ಯಾ ಸೈನಿಕರು ಉಕ್ರೇನ್ ನಲ್ಲಿರುವ ಅತೀ ದೊಡ್ಡ ಅಣುಸ್ಥಾವರದ ಮೇಲೆ ದಾಳಿ ಮಾಡಿದ್ದಾರೆ.

ಇಂದು ಮುಂಜಾನೆ 3 ಗಂಟೆ ಸುಮಾರಿಗೆ ರಷ್ಯಾ ಸೇನೆಯಿಂದ ಜಪೋರಿಝಿಯಾ ಅಣುಸ್ಥಾವರ ಮೇಲೆ ದಾಳಿ ನಡೆದಿದೆ. ಯುರೋಪಿನಲ್ಲಿಯೇ ಅತೀ ದೊಡ್ಡದಾದ ಅಣುಸ್ಥಾವರ ಇದಾಗಿದೆ. ಇದೀಗ ರಷ್ಯಾ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಅಣುಸ್ಥಾವರದಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ಎನರ್ಗೋಡರ್ನ ಮೇಯರ್ ಹೇಳಿದ್ದಾರೆ. 

ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದ ಕಟ್ಟಡ ಹಾಗೂ ಘಟಕಗಳ ಶತ್ರುಗಳ ನಿರಂತರ ಶೆಲ್ ದಾಳಿಗೊಳಗಾಗಿದ್ದು, ಪರಿಣಾಮವಾಗಿ ಜಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರವು ಧಗಧಗಿಸುತ್ತಿದೆ. ಒಂದು ವೇಳೆ ಈ ಅಣುಸ್ಥಾವರ ಸ್ಫೊಟಗೊಂಡರೆ 1986ರ ಚರ್ನೋಬೆಲ್ ದುರಂತಕ್ಕಿಂತ 10 ಪಟ್ಟು ಭೀಕರವಾಗಲಿದೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಮತ್ತೊಬ್ಬ ವಿದ್ಯಾರ್ಥಿಗೆ ಗುಂಡು!