Publish Date: Wed, 19 Jul 2023 (12:56 IST)
Updated Date: Wed, 19 Jul 2023 (12:50 IST)
ವಾಷಿಂಗ್ಟನ್ : ಅಮೆರಿಕದ ಅಲಾಸ್ಕಾದಲ್ಲಿ ಭಾನುವಾರ 7.4 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ಭೂಕಂಪ ಸಂಭವಿಸಿದ ಬಳಿಕ ಅಮೆರಿಕದ ಕೆಲವು ರಾಜ್ಯಗಳಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ.
ಅಲಾಸ್ಕಾ ಪೆನಿನ್ಸುಲಾ, ಅಲ್ಯೂಟಿಯನ್ ದ್ವೀಪಗಳು ಹಾಗೂ ಕುಕ್ ಇನ್ಲೆಟ್ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ ಎಂದು ಅಲಾಸ್ಕಾ ಭೂಕಂಪ ಕೇಂದ್ರ ತಿಳಿಸಿದೆ. ಭೂಕಂಪದ ಕೇಂದ್ರ ಬಿಂದುವನ್ನು 9.3 ಕಿ.ಮೀ ಆಳದಲ್ಲಿ ಗುರುತಿಸಲಾಗಿದೆ. ಸದ್ಯ ಇಲ್ಲಿಯವರೆಗೆ ಯಾವುದೇ ಸಾವು, ನೋವು, ಹಾನಿಯ ಬಗ್ಗೆ ವರದಿಯಾಗಿಲ್ಲ.