ಸಿಡ್ನಿ : ಆಸ್ಟ್ರೇಲಿಯಾದ ಕ್ಯಾನ್ಬೆರಾ ವಿಮಾನ ನಿಲ್ದಾಣದ ಚೆಕ್ ಇನ್ ಪ್ರದೇಶದಲ್ಲಿ ಬಂದೂಕುಧಾರಿಯೊಬ್ಬ ಐದು ಬಾರಿ ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಆತನ ಬಳಿ ಇದ್ದ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ. ಕೃತ್ಯದ ವೀಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ.
ಈ ವೇಳೆ ಒಬ್ಬನೇ ಘಟನೆಗೆ ಕಾರಣ ಎನ್ನುವುದರ ಬಗ್ಗೆ ಸುಳಿವು ದೊರೆತಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಹಾನಿ ಆಗಿಲ್ಲ.
ಮುನ್ನೆಚ್ಚರಿಕೆ ಕ್ರಮವಾಗಿ ಕ್ಯಾನ್ಬೆರಾ ವಿಮಾನ ನಿಲ್ದಾಣದ ಟರ್ಮಿನಲ್ನಿಂದ ತೆರವು ಮಾಡಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.