Publish Date: Fri, 04 Nov 2022 (08:40 IST)
Updated Date: Fri, 04 Nov 2022 (08:41 IST)
ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ರ್ಯಾಲಿ ನಡೆಯುತ್ತಿದ್ದ ವೇಳೆ ಗುಂಡಿನ ದಾಳಿ ನಡೆದಿದ್ದು, ಇಮ್ರಾನ್ ಖಾನ್ಗೆ ಗಾಯಗಳಾಗಿರುವ ಘಟನೆ ವಜೀರಾಬಾದ್ನಲ್ಲಿ ಗುರುವಾರ ನಡೆದಿದೆ.
ಇಂದು ಜಫರಾಲಿ ಖಾನ್ ಚೌಕ್ನಲ್ಲಿ ಘಟನೆ ನಡೆದಿದ್ದು, ಇಮ್ರಾನ್ ಖಾನ್ ಅವರ ಕಾಲಿಗೆ ಗಾಯಗಳಾಗಿವೆ. ದುಷ್ಕರ್ಮಿ 3-4 ಬಾರಿ ಗುಂಡು ಹಾರಿಸಿದ್ದಾನೆ.
ಘಟನೆಯಲ್ಲಿ ಇಮ್ರಾನ್ ಖಾನ್ ಅವರ ಸಹಾಯಕ ಸೇರಿದಂತೆ ನಾಲ್ವರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಇಮ್ರಾನ್ ಖಾನ್ ಅವರು ರ್ಯಾಲಿಯ ವೇಳೆ ತೆರೆದ ಕಂಟೇನರ್ನಲ್ಲಿ ಪ್ರಯಾಣಿಸುತ್ತಿದ್ದರು. ಗುಂಡಿನ ದಾಳಿ ನಡೆದ ಬಳಿಕ ಅವರನ್ನು ಬುಲೆಟ್ ಪ್ರೂಫ್ ವಾಹನಕ್ಕೆ ವರ್ಗಾಯಿಸಲಾಯಿತು. ಇಮ್ರಾನ್ ಖಾನ್ ಅವರ ಸಹಾಯಕ ಪಿಟಿಐ ಮುಖಂಡ ಫೈಸಲ್ ಜಾವೇದ್ ಕೂಡಾ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.