Webdunia - Bharat's app for daily news and videos

Install App

ನರೇಂದ್ರ ಮೋದಿಗೆ ಶ್ರೀಲಂಕಾದ ಅತ್ಯುನ್ನತ ಗೌರವ: ಭಾರತದ ಪ್ರಧಾನಿಗೆ 22ನೇ ಅಂತರರಾಷ್ಟ್ರೀಯ ಪ್ರಶಸ್ತಿ

Sampriya
ಶನಿವಾರ, 5 ಏಪ್ರಿಲ್ 2025 (14:49 IST)
Photo Courtesy X
ಕೊಲಂಬೊ: ನೆರೆಯ ಶ್ರೀಲಂಕಾ ದೇಶದೊಂದಿಗೆ ಸಂಬಂಧಗಳನ್ನು ಬಲಪಡಿಸಲು ಪ್ರಯತ್ನಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲ್ಲಿನ ಸರ್ಕಾರ ಅತ್ಯುನ್ನತ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರಿಗೆ ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರು ಮಿತ್ರ ವಿಭೂಷಣ‌ ಅತ್ಯುನ್ನತ ಪ್ರಶಸ್ತಿ ಪ್ರದಾನ ಮಾಡಿದರು.

ಇದು ಪ್ರಧಾನಿ ಮೋದಿ ಅವರಿಗೆ ದೊರೆತ 22ನೇ ಅಂತರರಾಷ್ಟ್ರೀಯ ಪ್ರಶಸ್ತಿಯಾಗಿದೆ. ಮಿತ್ರ ವಿಭೂಷಣ ಪ್ರಶಸ್ತಿಯು ಶ್ರೀಲಂಕಾ ಸರ್ಕಾರವು ರಾಷ್ಟ್ರದ ಮುಖ್ಯಸ್ಥರಿಗೆ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. . ಶ್ರೀಲಂಕಾದೊಂದಿಗೆ ಸ್ನೇಹ ಸಂಬಂಧವನ್ನು ಕಾಯ್ದುಕೊಳ್ಳುವ ವಿಶ್ವ ರಾಷ್ಟ್ರಗಳ ನಾಯಕರನ್ನು ಗೌರವಿಸಲು ಈ ಪ್ರಶಸ್ತಿಯನ್ನು ವಿಶೇಷವಾಗಿ ರಚಿಸಲಾಗಿದೆ.

ಭಾರತವು ಐತಿಹಾಸಿಕವಾಗಿ ಶ್ರೀಲಂಕಾದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದೆ. ಅಲ್ಲದೆ, ಶ್ರೀಲಂಕಾ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದಾಗ, ಸಹಾಯಹಸ್ತ ಚಾಚಿದ ಮೊದಲ ದೇಶ ಭಾರತವಾಗಿತ್ತು.

ನಂತರ ಮಾತನಾಡಿದ ಮೋದಿ, ಈ ಗೌರವವು ಕೇವಲ ವೈಯಕ್ತಿಕ ಮನ್ನಣೆಯಲ್ಲ, ಬದಲಾಗಿ 140 ಕೋಟಿ ಭಾರತೀಯರಿಗೆ ಸಲ್ಲುವ ಗೌರವವಾಗಿದೆ. ಪ್ರಶಸ್ತಿ ಪ್ರದಾನ ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ ಅವರು ಶ್ರೀಲಂಕಾದ ಅಧ್ಯಕ್ಷರು, ಸರ್ಕಾರ ಮತ್ತು ಜನರಿಗೆ ಧನ್ಯವಾದ. ಈ ಗೌರವವು ಎರಡೂ ನೆರೆಯ ರಾಷ್ಟ್ರಗಳ ನಡುವಿನ ದೀರ್ಘಕಾಲದ ಸಂಬಂಧ ಮತ್ತು ಬಲವಾದ ಸ್ನೇಹಕ್ಕೆ ಸಾಕ್ಷಿಯಾಗಿದೆ ಎಂದು ಮೋದಿ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments