ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ

ಭಾನುವಾರ, 16 ಡಿಸೆಂಬರ್ 2018 (07:24 IST)
ಕೊಲಂಬೊ : ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ಅವರು ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಪ್ರಧಾನಿಯಾಗಿದ್ದ ರಾನಿಲ್ ವಿಕ್ರಮಸಿಂಘೆ ಅವರನ್ನು ಪ್ರಧಾನಮಂತ್ರಿ ಸ್ಥಾನದಿಂದ ಕೆಳಗಿಳಿಸಿ ರಾಜಪಕ್ಸೆ ಅವರನ್ನು ಪ್ರಧಾನಿಯನ್ನಾಗಿ ಅಕ್ಟೋಬರ್ 26 ರಂದು ನೇಮಕ ಮಾಡಿತ್ತು. ಇದರಿಂದ ಬಾರೀ ವಿರೋಧ ವ್ಯಕ್ತವಾಗಿತ್ತು.


ಈ ಬಗ್ಗೆ ಕೋರ್ಟ್ ಮುಂದಿನ ತಿಂಗಳು ಸಂಪೂರ್ಣ ಬಹುಮತ ಸಾಬೀತು ಮಾಡುವವರೆಗೂ ಪ್ರಧಾನಮಂತ್ರಿಯಾಗಿ ಮುಂದುವರೆಯುವಂತೆ ಆದೇಶ ನೀಡಿತ್ತು. ಆದರೆ ಈ ಆದೇಶವನ್ನು ಶ್ರೀಲಂಕಾ ಸುಪ್ರೀಂಕೋರ್ಟ್ ತಡೆಹಿಡಿದ ಹಿನ್ನೆಲೆಯಲ್ಲಿ ರಾಜಪಕ್ಸೆ ಇದೀಗ ರಾಜೀನಾಮೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಮನೆಯ ಮುಂದೆ ಆಡುತ್ತಿದ್ದ 9 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ