Select Your Language

Notifications

webdunia
webdunia
webdunia
webdunia

285 ದಿನಗಳ ಬಳಿಕ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿ ಸ್ಪರ್ಶಿಸಿದ ಸುನೀತಾ ವಿಲಿಯಮ್ಸ್ ಮತ್ತು ತಂಡ

285 ದಿನಗಳ ಬಳಿಕ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿ ಸ್ಪರ್ಶಿಸಿದ ಸುನೀತಾ ವಿಲಿಯಮ್ಸ್ ಮತ್ತು ತಂಡ

Sampriya

ನ್ಯೂಯಾರ್ಕ್‌ , ಬುಧವಾರ, 19 ಮಾರ್ಚ್ 2025 (04:12 IST)
ನ್ಯೂಯಾರ್ಕ್‌: 285 ದಿನಗಳಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಭಾರತ ಮೂಲದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಫ್ಲಾರಿಡಾದ ಕಡಲ ತೀರದಲ್ಲಿ ಭೂಮಿಯನ್ನು ಸ್ಪರ್ಶಿಸಿದ್ದಾರೆ.

ನಾಸಾ ಹಾಗೂ ಎಲಾನ್ ಮಸ್ಕ್ ಅವರ ಸ್ಪೇಸ್ ಎಕ್ಸ್‌ನ ಜಂಟಿ ಕಾರ್ಯಾಚರಣೆ ಫಲ ನೀಡಿದೆ. ಸುನೀತಾ ವಿಲಿಯಮ್ಸ್ , ಬುಚ್ ವಿಲ್ಮೋರ್, ನಿಕ್ ಹೇಗ್ , ಅಲೆಕ್ಸಾಂಡರ್ ಗೊರ್ಬನೊವ್ ಅವರಿದ್ದ ಸ್ಪೇಸ್ಎಕ್ಸ್‌ ಡ್ರ್ಯಾಗನ್ ಕ್ಯಾಪ್ಸುಲ್ ಫ್ಲಾರಿಡಾದ ಕಡಲ ತೀರದಲ್ಲಿ ಬಂದಿಳಿಯಿತು.

ಕಳೆದ ವರ್ಷ ಜೂನ್ 5ರಂದು ಬೋಯಿಂಗ್ ಸ್ಟಾರ್‌ಲೈನರ್‌ ಬಾಹ್ಯಾಕಾಶ ನೌಕೆಯಲ್ಲಿ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನಿತಾ ವಿಲಿಯಮ್ಸ್ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದರು. 8 ದಿನಗಳ ಕಾರ್ಯಾಚರಣೆಗಾಗಿ ತೆರಳಿದ್ದ ಇವರು ಆ ಬಳಿಕ ಭೂಮಿಗೆ ಮರಳಬೇಕಿತ್ತು. ಆದರೆ, ತಾಂತ್ರಿಕ ಸಮಸ್ಯೆಗಳಿಂದ ಇಬ್ಬರು ಗಗನಯಾತ್ರಿಗಳನ್ನು ಬಾಹ್ಯಾಕಾಶದಲ್ಲೇ ಬಿಟ್ಟು ಸ್ಟಾರ್‌ಲೈನರ್‌ ಭೂಮಿಗೆ ಮರಳಿತು.

ನಂತರದಲ್ಲಿ ಗಗನಯಾತ್ರಿಗಳನ್ನು ಭೂಮಿಗೆ ಕರೆತರುವ ಪ್ರಯತ್ನ ಹಲವು ಬಾರಿ ನಡೆಯಿತು. ಆದರೆ, ಅದು ಫಲ ನೀಡಲಿಲ್ಲ. ಇದೀಗ ನಾಸಾ ಮತ್ತು  ಸ್ಪೇಸ್ ಎಕ್ಸ್ ಜಂಟಿ ಕಾರ್ಯಾಚರಣೆಯ ಫಲವಾಗಿ ಗಗನಯಾತ್ರಿಗಳನ್ನು ಯಶಸ್ವಿಯಾಗಿ ಭೂಮಿಗೆ ಕರೆ ತರಲಾಗಿದೆ.

ಸ್ಪೇಸ್ ಎಕ್ಸ್‌ನ ಫಾಲ್ಕನ್ 9 ರಾಕೆಟ್ ಮೂಲಕ ಫ್ಲಾರಿಡಾದ ಕೆನಡಿ ಸ್ಪೇಸ್ ಸೆಂಟರ್‌ನಿಂದ ಕಳೆದ ಶುಕ್ರವಾರ ರಾತ್ರಿ 7.03ಕ್ಕೆ ನಭಕ್ಕೆ ಚಿಮ್ಮಿದ್ದ ಡ್ರ್ಯಾಗನ್ ಹೆಸರಿನ ಗಗನನೌಕೆಯನ್ನು ಭಾನುವಾರ ಬೆಳಿಗ್ಗೆ ಐಎಸ್ಐಎಸ್‌ಗೆ ಡಾಕಿಂಗ್ (ಜೋಡಣೆ) ಮಾಡುವಲ್ಲಿ ಯಶಸ್ವಿಯಾಗಿತ್ತು.

ಸ್ಪೇಸ್ಎಕ್ಸ್ ಡ್ರ್ಯಾಗನ್ ಗಗನನೌಕೆಯಲ್ಲಿ ತೆರಳಿದ ನಾಸಾದ ಆ್ಯನ್ ಮೆಕ್ಲೀನ್ ಮತ್ತು ನಿಕೋಲ್ ಅಯೇರ್ಸ್, ಜಾಕ್ಸಾ ಗಗನಯಾನಿ ತಕುಯೊ ಒನಿಶಿ ಮತ್ತು ರೊಸ್ಕೋಸ್ಮಸ್ ನ ಕಿರಿಲ್ ಪೆಸ್ಕೋವ್ ಅವರು ಒಬ್ಬೊಬ್ಬರಾಗಿ ಐಎಸ್ಎಸ್ ಪ್ರವೇಶಿಸಿದ್ದರು.

ಗಗನಯಾತ್ರಿಗಳು ಸ್ಪೇಸ್ಎಕ್ಸ್‌ ಡ್ರ್ಯಾಗನ್ ಕ್ಯಾಪ್ಸುಲ್‌ ಕಡಲ ತೀರವನ್ನು ಸ್ಪರ್ಶಿಸುತ್ತಿದ್ದಂತೆ ಜಯಘೋಷಗಳು ಮೊಳಗಿದವು. ಗಗನಯಾತ್ರಿಗಳು ಹೊರಬರುತ್ತಿದ್ದಂತೆ ಅವರಿಗೆ ತುರ್ತು ಆರೋಗ್ಯ ತಪಾಸಣೆಗೆ ಒಳಪಡಿಸಲಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಆಕೆ ಸತ್ತಿದ್ದಾಳೆಂದು ಘೋಷಿಸಿ: ಸುಧೀಕ್ಷಾ ಮಿಸ್ಸಿಂಗ್ ಬಗ್ಗೆ ಪೋಷಕರಿಂದ ಪೊಲೀಸ್‌ಗೆ ಪತ್ರ