ಭಾರತದಲ್ಲಿ ಸಲಿಂಗ ವಿವಾಹಗಳನ್ನು ಕಾನೂನು ಬದ್ಧಗೊಳಿಸಬೇಕೇ ಎಂಬ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ.ಇನ್ನು ಈ ಹಿಂದೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರನ್ನೊಳಗೊಂಡ ಸಂವಿಧಾನ ಪೀಠವು ಹತ್ತು ದಿನಗಳ ವಿಚಾರಣೆಯ ನಂತರ ಈ ವರ್ಷ ಮೇ 11 ರಂದು ತೀರ್ಪನ್ನು ಕಾಯ್ದಿರಿಸಿತ್ತು.