Webdunia - Bharat's app for daily news and videos

Install App

ತಾಲಿಬಾನ್ : ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿ

Webdunia
ಗುರುವಾರ, 8 ಡಿಸೆಂಬರ್ 2022 (08:31 IST)
ಕಾಬೂಲ್ : ಕಳೆದ ವರ್ಷ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ತಾಲಿಬಾನ್ 1 ವರ್ಷಕ್ಕಿಂತಲೂ ಹೆಚ್ಚು ಕಾಲ ಹೆಣ್ಣುಮಕ್ಕಳಿಗೆ ಪ್ರೌಢಶಾಲೆಗೆ ಹೋಗಲು ನಿರ್ಬಂಧಿಸಿದ್ದು, ಇದೀಗ ಈ ವಾರ ನಡೆಯಲಿರುವ ಪ್ರೌಢಶಾಲಾ ಪರೀಕ್ಷೆಯನ್ನು  ಬರೆಯಲು ಹೆಣ್ಣುಮಕ್ಕಳಿಗೂ ಅನುಮತಿ ನೀಡಿದೆ.

ಅಫ್ಘಾನಿಸ್ತಾನದ 34 ಪ್ರಾಂತ್ಯಗಳ ಪೈಕಿ 31 ಪ್ರಾಂತ್ಯಗಳಿಗೆ ತಾಲಿಬಾನ್ನ ನಿರ್ಧಾರ ಅನ್ವಯಿಸುತ್ತದೆ. ಪ್ರೌಢಶಾಲಾ ಪರೀಕ್ಷೆ ಬುಧವಾರದಿಂದ ಪ್ರಾರಂಭವಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.

ಪರೀಕ್ಷೆಯನ್ನು ವಿದ್ಯಾರ್ಥಿನಿಯರು ಕೂಡಾ ಬರೆಯಲು ಅನುಮತಿಸಲಾಗುವುದು ಎಂದು ಕಾಬೂಲ್ ಶಿಕ್ಷಣ ಇಲಾಖೆಯ ಮುಖ್ಯಸ್ಥ ಎಹ್ಸಾನುಲ್ಲಾ ಕಿತಾಬ್ ತಿಳಿಸಿದ್ದಾರೆ.

ವರದಿಗಳ ಪ್ರಕಾರ ಬುಧವಾರ ನಡೆಯಲಿರುವ ಪರೀಕ್ಷೆಗೆ ಡ್ರೆಸ್ ಕೋಡ್ ನೀಡಲಾಗಿದೆ. ವಿದ್ಯಾರ್ಥಿನಿಯರು ಹಾಗೂ ಶಿಕ್ಷಕಿಯರು ಕಡ್ಡಾಯವಾಗಿ ಹಿಜಬ್ ಅಥವಾ ಸ್ಕಾರ್ಫ್ ಅನ್ನು ಧರಿಸಬೇಕು.

ಪರೀಕ್ಷೆಯಲ್ಲಿ ಸೆಲ್ಫೋನ್ ಬಳಕೆ ನಿಷೇಧಿಸಲಾಗಿದೆ. ಬುಧವಾರ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿನಿಯರಿಗೆ ಚಳಿಗಾಲದ ರಜೆಯ ಬಳಿಕ ಮಾರ್ಚ್ ಮಧ್ಯದ ವೇಳೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಸಿಬಿ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ ದಿವ್ಯಾಂಶಿ ತಾಯಿ ದಿಢೀರ್‌ ಠಾಣೆ ಮೆಟ್ಟಿಲೇರಿದ್ದೇಕೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿರುವ ಸಚಿವ ಕೆಜೆ ಜಾರ್ಜ್ ವಜಾ ಮಾಡಿ: ಡಾ ಸಿಎನ್ ಅಶ್ವತ್ಥನಾರಾಯಣ

ಯೆಸ್ ಬ್ಯಾಂಕ್‌ಗೆ ₹3,000 ಕೋಟಿ ಸಾಲ ವಂಚನೆ: ಅನಿಲ್‌ ಅಂಬಾನಿಗೆ ಜಾರಿ ನಿರ್ದೇಶನಾಲಯ ಶಾಕ್‌

ರಷ್ಯಾದಲ್ಲಿ ತಾಂತ್ರಿಕ ದೋಷದಿಂದ ಪ್ಯಾಸೇಂಜರ್‌ ವಿಮಾನ ಪತನ: ಆರು ಸಿಬ್ಬಂದಿ ಸೇರಿ 50 ಮಂದಿ ಸಾವು

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments