ಬೀಜಿಂಗ್ : ಇತ್ತೀಚಿನ ದಿನಗಳಲ್ಲಿ ಮಕ್ಕಳು ಹಾಗೂ ಹದಿಹರೆಯದವರು ಹೆಚ್ಚಾಗಿ ಮೊಬೈಲ್ನಲ್ಲಿ ಇಂಟರ್ನೆಟ್ ಬಳಕೆ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇದಕ್ಕೆ ಚೀನಾ ದೇಶವು ಹೊಸ ಐಡಿಯಾವೊಂದನ್ನು ಹುಡುಕಿಕೊಂಡಿದೆ.
ಹೌದು. ಚೀನಾದಲ್ಲಿ ರಾತ್ರಿ ವೇಳೆ ಮಕ್ಕಳು ಹಾಗೂ ಹದಿಹರೆಯದವರು ಮೊಬೈಲ್ನಲ್ಲಿ ಇಂಟರ್ನೆಟ್ ಬಳಕೆಗೆ ಕಡಿವಾಣ ಹಾಕಲು ಮುಂದಾಗಿದೆ. ಈ ಹೊಸ ನಿಯಮ ಸೆಪ್ಟೆಂಬರ್ ತಿಂಗಳಿನಿಂದ ಜಾರಿಗೆ ಬರಲಿರುವುದಾಗಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ಚೀನಾದ ಸೈಬರ್ಸ್ಪೇಸ್ ಅಡ್ಮಿನಿಸ್ಟ್ರೇಷನ್ ಈ ಹೊಸ ನಿಯಮ ಜಾರಿಗೆ ತಂದಿದ್ದು, ಮಕ್ಕಳು ಹಾಗೂ ಯುವಕರನ್ನು ಮೊಬೈಲ್ ಬಳಕೆಯಿಂದ ಹೊರತರುವುದೇ ಇದರ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯವರೆಗೆ ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.