Webdunia - Bharat's app for daily news and videos

Install App

ಅಫ್ಘಾನಿಸ್ತಾನ ಭೀಕರ ಭೂಕಂಪ: ವಿದೇಶದಲ್ಲಿದ್ರೂ ಕರ್ತವ್ಯ ಮರೆಯದ ಪ್ರಧಾನಿ ನರೇಂದ್ರ ಮೋದಿ

Sampriya
ಸೋಮವಾರ, 1 ಸೆಪ್ಟಂಬರ್ 2025 (15:46 IST)
Photo Credit X
ಅಪ್ಘಾನಿಸ್ತಾನ: ಭೂಕಂಪದಿಂದಾಗಿ 800ಮಂದಿ ಸಾವನ್ನಪ್ಪಿ, 2,500ಮಂದಿ ಗಂಭೀರವಾಗಿ ಗಾಯಗೊಂಡು ಅಪಾರ ಆಸ್ತಿ ಹಾನಿಯಾಗಿರುವ ಅಪ್ಘಾನಿಸ್ತಾನ‌ದ ಸ್ಥಿತಿಗೆ ಹಲವು ದೇಶಗಳು ಬೇಸರ ವ್ಯಕ್ತಪಡಿಸಿದೆ. 

ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾನದಲ್ಲಿ ಬರೆದುಕೊಂಡು, ಅಪ್ಘಾನಿಸ್ತಾನದ ಪರಿಸ್ಥಿತಿಗೆ ಕಂಬನಿ ಮಿಡಿದಿದ್ದಾರೆ. 

ಅಫ್ಘಾನಿಸ್ತಾನದಲ್ಲಿ ಭೂಕಂಪದಿಂದಾಗಿ ಜೀವಹಾನಿಯ ಸುದ್ದಿ ಕೇಳಿ ತೀವ್ರ ದುಃಖವಾಯಿತು. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಮಾನವೀಯ ನೆರವು ಮತ್ತು ಪರಿಹಾರವನ್ನು ಒದಗಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದರು.

ಅಫ್ಘಾನಿಸ್ತಾನದ ಪೂರ್ವದಲ್ಲಿ ಸಂಭವಿಸಿದ ಭೂಕಂಪದಲ್ಲಿ ಕನಿಷ್ಠ 800 ಜನರು ಸಾವನ್ನಪ್ಪಿದ್ದಾರೆ, 2,500 ಜನರು ಗಾಯಗೊಂಡಿದ್ದಾರೆ ಮತ್ತು ಹಲವಾರು ಹಳ್ಳಿಗಳು ನಾಶವಾಗಿದೆ ಎಂದು ತಾಲಿಬಾನ್ ಸರ್ಕಾರದ ವಕ್ತಾರರು ತಿಳಿಸಿದ್ದಾರೆ. 

ಭಾನುವಾರ ತಡರಾತ್ರಿ (ಆಗಸ್ಟ್ 31, 2025) 6.0 ತೀವ್ರತೆಯ ಭೂಕಂಪವು ನೆರೆಯ ನಂಗಹಾರ್ ಪ್ರಾಂತ್ಯದ ಜಲಾಲಾಬಾದ್ ನಗರದ ಸಮೀಪವಿರುವ ಕುನಾರ್ ಪ್ರಾಂತ್ಯದ ಪಟ್ಟಣಗಳ ಸರಣಿಯನ್ನು ಹೊಡೆದಿದೆ.

ಮೋದಿ ಸಾಮಾಜಿಕ ಜಾಲತಾಣ ಎಕ್ಸ್‌ ಪೋಸ್ಟ್‌ನಲ್ಲಿ ಹೀಗಿದೆ."ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದ ಜೀವಹಾನಿಯಿಂದ ತೀವ್ರ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ, ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಮಾನವೀಯ ನೆರವು ಮತ್ತು ಪರಿಹಾರವನ್ನು ಒದಗಿಸಲು ಭಾರತ ಸಿದ್ಧವಾಗಿದೆ" ಎಂದು X ನಲ್ಲಿ  ಮೋದಿ ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಬೆಳ್ತಂಗಡಿ, ಗಿರೀಶ್ ಮಟ್ಟಣ್ಣನವರ್‌, ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ಶಾಕ್‌

ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ಬಗ್ಗೆ ಗುಡುಗಿದ ಪ್ರಧಾನಿ ಮೋದಿ

ಶಾಂಘೈ ಶೃಂಗ ಸಭೆಯಲ್ಲಿ ಮೋದಿ, ಜಿನ್ ಪಿಂಗ್ ಭಾರೀ ಕ್ಲೋಸ್: ಪಾಕ್ ಪ್ರಧಾನಿ ಸೀನ್ ನಲ್ಲೂ ಇಲ್ಲ

ಮುಂದಿನ ಸುದ್ದಿ
Show comments