Select Your Language

Notifications

webdunia
webdunia
webdunia
webdunia

ಭೀಕರ ಸ್ಫೋಟ : 12 ಮಂದಿ ಪೊಲೀಸರ ದಾರುಣ ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ!

ಭೀಕರ ಸ್ಫೋಟ : 12 ಮಂದಿ ಪೊಲೀಸರ ದಾರುಣ ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ!
ಇಸ್ಲಾಮಾಬಾದ್ , ಬುಧವಾರ, 26 ಏಪ್ರಿಲ್ 2023 (14:14 IST)
ಇಸ್ಲಾಮಾಬಾದ್ : ಪಾಕಿಸ್ತಾನದ ಸ್ವಾತ್ನ ಭಯೋತ್ಪಾದನಾ ನಿಗ್ರಹ ಕಚೇರಿಯಲ್ಲಿ ನಡೆದ ಭೀಕರ ಸ್ಫೋಟದಲ್ಲಿ ಕನಿಷ್ಠ 12 ಮಂದಿ ಪೊಲೀಸರು ಮೃತಪಟ್ಟಿದ್ದು. 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
 
ಸದ್ಯ ಘಟನಾ ಸ್ಥಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಖೈಬರ್ ಪುಂಖ್ಯಾ ಪ್ರಾಂತ್ಯದ ಪೊಲೀಸ್ ಮಹಾನಿರೀಕ್ಷಕ ಅಖ್ತರ್ ಹಯಾತ್ ಖಾನ್ ಹೇಳಿದ್ದಾರೆ. 

ಘಟನೆ ಕುರಿತು ಮಾತನಾಡಿರುವ ಭಯೋತ್ಪಾದನಾ ನಿಗ್ರಹ ಇಲಾಖೆ ಡಿಐಜಿ ಖಾಲಿದ್ ಸೊಹೈಲ್, ಪೊಲೀಸ್ ಠಾಣೆಯ ಮೇಲೆ ಯಾವುದೇ ಬಾಂಬ್ ದಾಳಿ ಅಥವಾ ಗುಂಡಿನ ದಾಳಿ ನಡೆದಿಲ್ಲ. ಇದು ಆತ್ಮಹತ್ಯಾ ದಾಳಿಯೂ ಅಲ್ಲ. ಮದ್ದುಗುಂಡುಗಳು ಮತ್ತು ಶೆಲ್ಗಳನ್ನು ಸಂಗ್ರಹಿಸಿದ್ದ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ. ಹೊರತಾಗಿ ಪೊಲೀಸ್ ಠಾಣೆಯ ಮೇಲೆ ಯಾವುದೇ ದಾಳಿ ನಡೆದಿಲ್ಲ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ಕೇದಾರನಾಥ ಯಾತ್ರೆ ಆರಂಭ