Publish Date: Wed, 09 Aug 2023 (14:00 IST)
Updated Date: Wed, 09 Aug 2023 (16:10 IST)
ಇಸ್ಲಾಮಾಬಾದ್ : ಕರಾಚಿಯಿಂದ ರಾಲ್ಪಿಂಡಿಗೆ ತೆರಳುತ್ತಿದ್ದ ಹಜಾರಾ ಎಕ್ಸ್ಪ್ರೆಸ್ ರೈಲು ಭೀಕರ ದುರಂತಕ್ಕೀಡಾಗಿದೆ. ಘಟನೆಯಲ್ಲಿ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದು, 80 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.
ಕರಾಚಿಯಿಂದ 275 ಕಿಲೋ ಮೀಟರ್ ದೂರದಲ್ಲಿರುವ ರಾವಲ್ಪಿಂಡಿಗೆ ತೆರಳುತ್ತಿದ್ದ ಹಜಾರಾ ಎಕ್ಸ್ಪ್ರೆಸ್ ರೈಲಿನ ಒಟ್ಟು 10 ಬೋಗಿಗಳು ಹಳಿ ತಪ್ಪಿದೆ. ಘಟನೆಯಲ್ಲಿ ಈವೆರೆಗೆ 20 ಮಂದಿ ಸಾವನ್ನಪ್ಪಿದ್ದು, 80 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆದ್ರೆ ಘಟನೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ.
ರೈಲ್ವೆ ಆಡಳಿತ ಮಂಡಳಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಪಾಕಿಸ್ತಾನ ಸೇನೆ ಕೂಡ ಕಾರ್ಯಾಚರಣೆಗೆ ಕೈಜೋಡಿಸಿದ್ದು, ಸಮೀಪದ ನೆಲೆಗಳಿಂದ ಹೆಚ್ಚಿನ ಸೈನಿಕರನ್ನ ಕರೆಸಿಕೊಳ್ಳಲಾಗಿದೆ. ಘಟನಾ ಸ್ಥಳಕ್ಕೆ ಸಮೀಪದಲ್ಲಿರುವ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಇತರ ಪ್ರಯಾಣಿಕರನ್ನ ನಿಗದಿತ ಸ್ಥಳಕ್ಕೆ ತಲುಪಿಸಲು ಪರ್ಯಾಯ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಸ್ಥಳೀಯ ಜಿಲ್ಲಾಧಿಕಾರಿ ತಿಳಿಸಿದ್ದಾರೆ.