Select Your Language

Notifications

webdunia
webdunia
webdunia
webdunia

ಇರಾಕ್ ರಾಜಧಾನಿ ಬಾಗ್ದಾದ್‌ನಲ್ಲಿ ಉಗ್ರರ ಅಟ್ಟಹಾಸ

ಇರಾಕ್ ರಾಜಧಾನಿ ಬಾಗ್ದಾದ್‌ನಲ್ಲಿ ಉಗ್ರರ ಅಟ್ಟಹಾಸ
ಬಾಗ್ದಾದ್ , ಶುಕ್ರವಾರ, 9 ಜೂನ್ 2017 (17:21 IST)
ನಗರದ ಜನನಿಬಿಡ ಪ್ರದೇಶದಲ್ಲಿ ಆತ್ಮಾಹುತಿ ದಳದ ಉಗ್ರರು ತಮ್ಮನ್ನು ತಾವೇ ಸ್ಫೋಟಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳದಲ್ಲಿದ್ದ 11 ಜನರು ಸಾವನ್ನಪ್ಪಿದ್ದು 17 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.
 
ಕಳೆದ ಕೆಲ ದಿನಗಳಿಂದ ಉಗ್ರರ ದಾಳಿಗಳಲ್ಲಿ ಹೆಚ್ಚಳವಾಗಿದ್ದು, ಇಂದು ಮಾರ್ಕೆಟ್‌‌ಗೆ ನುಗ್ಗಿದ ಆತ್ಮಾಹುತಿ ದಳದ ಅತಿ ಹೆಚ್ಚು ಜನ ಸೇರಿದ್ದ ಸ್ಥಳದಲ್ಲಿ ಸ್ಫೋಟಿಸಿಕೊಂಡಿದ್ದಾರೆ.
 
ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ನಗರಾದ್ಯಂತ ಕಟ್ಟೆಚ್ಚರ ಘೋಷಿಸಲಾಗಿದ್ದು ಅನುಮಾನ ಬಂದ ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನೀವಾದರೂ ಸಾಲ ಮನ್ನಾ ಮಾಡಿ: ಸಚಿವ ಎಂ.ಬಿ.ಪಾಟೀಲ್‌‌ಗೆ ರೈತರ ದುಂಬಾಲು