Select Your Language

Notifications

webdunia
webdunia
webdunia
webdunia

ಅಮೆರಿಕ ಅಧ್ಯಕ್ಷ ಈಗ ಸಂಪೂರ್ಣ ಗುಣಮುಖ

ಅಮೆರಿಕ ಅಧ್ಯಕ್ಷ ಈಗ ಸಂಪೂರ್ಣ ಗುಣಮುಖ
ವಾಷಿಂಗ್ಟನ್ , ಭಾನುವಾರ, 5 ಮಾರ್ಚ್ 2023 (08:28 IST)
ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷ ಜೋ ಬೈಡನ್ಗೆ ಇದ್ದ ಕ್ಯಾನ್ಸರ್ ಅನ್ನು ತೆಗೆದುಹಾಕಲಾಗಿದೆ. ಅವರು ಇದೀಗ ಗುಣಮುಖರಾಗಿದ್ದು, ಹೆಚ್ಚಿನ ಚಿಕಿತ್ಸೆಯ ಅಗತ್ಯವಿಲ್ಲ ಎಂದು ಶ್ವೇತಭವನದ ವೈದ್ಯ ಕೆವಿನ್ ಓ’ಕಾನರ್ ಶುಕ್ರವಾರ ತಿಳಿಸಿದ್ದಾರೆ.
 
80 ವರ್ಷ ಪ್ರಾಯದ ಅಮೆರಿಕ ಅಧ್ಯಕ್ಷರಿಗೆ ಎದೆಯಲ್ಲಿ ಚರ್ಮದ ಗಾಯದ ರೂಪದಲ್ಲಿ ಕ್ಯಾನ್ಸರ್ ಇದ್ದಿದ್ದು, ಅದನ್ನು ಫೆಬ್ರವರಿ ತಿಂಗಳಿನಲ್ಲಿ ತೆಗೆದುಹಾಕಲಾಗಿದೆ. ಬೈಡನ್ಗೆ ಇದ್ದಿದ್ದ ಎಲ್ಲಾ ಕ್ಯಾನ್ಸರ್ ಅಂಗಾಂಶಗಳನ್ನು ಯಶಸ್ವಿಯಾಗಿ ತೆಗೆದುಹಾಕಲಾಗಿದೆ.

ಅವರ ಆರೋಗ್ಯದ ರಕ್ಷಣೆಯ ಭಾಗವಾಗಿ ಕಣ್ಗಾವಲು ಮುಂದುವರಿಸಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ತೆರೆದ ವಾಹನದಲ್ಲಿ ಎಚ್‌ಡಿಡಿ 100 ಕಿ.ಮೀ. ರೋಡ್ ಶೋ