ಮಕ್ಕಳ ಮುಂದೆಯೇ ಪತ್ನಿಯನ್ನು ಕಡಾಯಿಯಲ್ಲಿ ಬೇಯಿಸಿದ ಕ್ರೂರಿ ಗಂಡ!

Webdunia
ಶುಕ್ರವಾರ, 15 ಜುಲೈ 2022 (10:52 IST)
ಇಸ್ಲಾಮಾಬಾದ್ : ವ್ಯಕ್ತಿಯೋರ್ವ ತನ್ನ ಆರು ಮಕ್ಕಳ ಮುಂದೆಯೇ ಪತ್ನಿಯನ್ನು ಕೊಂದು ಕಡಾಯಿಯಲ್ಲಿ ಬೇಯಿಸಿರುವ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.
 
ನಗರದ ಗುಲ್ಶನ್-ಎ-ಇಕ್ಬಾಲ್ ಪ್ರದೇಶದ ಖಾಸಗಿ ಶಾಲೆಯ ಅಡುಗೆಮನೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಆಕೆಯ ಪತಿಯೇ ಕೊಂದಿರುವ ವಿಚಾರ ತಿಳಿದುಬಂದಿದೆ.

ಆರೋಪಿಯನ್ನು ಆಶಿಕ್ ಎಂದು ಗುರುತಿಸಲಾಗಿದ್ದು, ಬಜಾರ್ ಎಜೆನ್ಸಿಯ ಶಾಲೆಯಲ್ಲಿ ವಾಚ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಆಶಿಕ್, ಸುಮಾರು 8-9 ತಿಂಗಳಿಂದ ಮುಚ್ಚಲಾಗಿದ್ದ ಈ ಶಾಲೆಯ ಸೇವಕ ಕ್ವಾರ್ಟರ್ಸ್ನಲ್ಲಿ ವಾಸಿಸುತ್ತಿದ್ದನು.

ಘಟನೆ ಬಳಿಕ ಆರೋಪಿ ತನ್ನ ಮೂವರು ಮಕ್ಕಳೊಂದಿಗೆ ಪರಾರಿಯಾಗಿದ್ದು, ಆತನ 15 ವರ್ಷದ ಪುತ್ರಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾಳೆ. ಇದೀಗ ಮೂವರು ಮಕ್ಕಳ ಪಾಲನೆಯನ್ನು ಪೊಲೀಸರು ಮಾಡುತ್ತಿರುವುದಾಗಿ ಜಿಲ್ಲಾ ಪೂರ್ವ ಹಿರಿಯ ಪೊಲೀಸ್ ಅಧೀಕ್ಷಕ (ಎಸ್ಎಸ್ಪಿ) ಅಬ್ದುರ್ ರಹೀಮ್ ಶೆರಾಜಿ ಅವರು ಹೇಳಿದ್ದಾರೆ. 

ಘಟನೆ ಸಂಬಂಧ ಮಕ್ಕಳ ಹೇಳಿಕೆ ಪಡೆದಿರುವ ಪೊಲೀಸರು, ಆರೋಪಿ ಮೊದಲು ತನ್ನ ಪತ್ನಿಯನ್ನು ದಿಂಬಿನಿಂದ ಕತ್ತು ಹಿಸುಕಿ ಕೊಂದಿದ್ದಾನೆ. ನಂತರ ಮಕ್ಕಳ ಮುಂದೆಯೇ ಕಡಾಯಿಯಲ್ಲಿ ಬೇಯಿಸಿದ್ದಾನೆ. ಅಲ್ಲದೇ ಮಹಿಳೆಯ ಒಂದು ಕಾಲು ಕೂಡ ಆಕೆಯ ದೇಹದಿಂದ ಬೇರ್ಪಟ್ಟಿದೆ ಎಂದು ತಿಳಿಸಿದ್ದಾರೆ. ಆದರೆ ಈ ಘಟನೆ ಹಿಂದಿನ ಕಾರಣವೇನು ಎಂಬುವುದು ತಿಳಿದುಬಂದಿಲ್ಲ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗ್ತೀದ್ರಾ: ಕುಮಾರಸ್ವಾಮಿಗೆ ಶಿವಕುಮಾರ್ ಪ್ರಶ್ನೆ

ಮಧ್ಯಪ್ರದೇಶ ಸಿಎಂ ಪುತ್ರನ ಮಾದರಿ ನಡೆ: ಸಾಮೂಹಿಕ ವಿವಾಹದಲ್ಲೇ ಹಸೆಮಣೆಯೇರಿದ ಅಭಿಮನ್ಯು ಯಾದವ್‌

ಸಿಎಂ ಭೇಟಿ ಬಳಿಕ ಮತ್ತೇ ಶಾಂತಿ ಮಂತ್ರ ಪಠಿಸಿದ ಡಿಕೆ ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಪ್ರಕರಣ, ರಾಹುಲ್ ಗಾಂಧಿ, ಸೋನಿಯಾ ವಿರುದ್ಧ ಹೊಸ ಪ್ರಕರಣ

ದಿತ್ವಾ ಚಂಡಮಾರುತ, ಶ್ರೀಲಂಕಾದಲ್ಲಿ 132ಮಂದಿ ಸಾವು, 176ಮಂದಿ ನಾಪತ್ತೆ

ಮುಂದಿನ ಸುದ್ದಿ
Show comments