ಇಸ್ಮಾಮಾಬಾದ್ : ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್, ಪುತ್ರಿ ಮರ್ಯಮ್ ಅವರಿಗೆ ವಿಧಿಸಿದ ಜೈಲು ಶಿಕ್ಷೆಯನ್ನು ರದ್ದುಗೊಳಿಸುವಂತೆ ಇಸ್ಲಾಮಾಬಾದ್ ಹೈಕೋರ್ಟ್ ಆದೇಶಿಸಿದೆ.
ಅವೆನಿಫೀಲ್ಡ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯ ಪ್ರಧಾನಿ ನವಾಜ್ ಷರೀಫ್ಗೆ 10 ವರ್ಷ ಜೈಲು ಶಿಕ್ಷೆ ಹಾಗೂ ಮಗಳಿಗೆ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಶರೀಫ್ ಕುಟುಂಬ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಇದರ ವಿಚಾರಣೆ ನಡೆಸಿದ ಹೈಕೋರ್ಟ್ ನವಾಜ್ ಶರೀಫ್ ಹಾಗೂ ಪುತ್ರಿ ಮರ್ಯಮ್ ಅವರಿಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಗೊಳಿಸಿ ತಲಾ 5 ಲಕ್ಷ ರೂ. ಬಾಂಡ್ ಆಧಾರದ ಮೇರೆಗೆ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ. ಇದರಿಂದ ನವಾಜ್ ಶರೀಫ್ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.