ನ್ಯೂಯಾರ್ಕ್: 2016ರ ಅಧ್ಯಕ್ಷೀಯ ಚುನಾವಣೆ ವೇಳೆ ತಮ್ಮ ವಿರುದ್ಧ ಹೇಳಿಕೆ ನೀಡದಂತೆ ನೀಲಿಚಿತ್ರಗಳ ತಾರೆಗೆ ಹಣ ನೀಡಿದ್ದ ಪ್ರಕರಣದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಈ ಮೂಲಕ ಟ್ರಂಪ್ ಅವರಿಗೆ ಬಂಧನದ ಭೀತಿ ಎದುರಾಗಿದೆ. ಟ್ರಂಪ್ ನೀಡುವ ಶಿಕ್ಷೆಯನ್ನು ಮುಂದಿನ ವಾರ ಪ್ರಕಟಿಸಲಾಗುವುದಾಗಿ ನ್ಯಾಯಾಲಯ ಹೇಳಿದೆ.
ಇನ್ನೂ ಬಂಧನದ ಭೀತಿ ಹಿನ್ನೆಲೆತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಈಗಾಗಲೇ ಟ್ರಂಪ್ ಸಿದ್ಧತೆ ಮಾಡಿಕೊಂಡಿದ್ದಾರೆ.
ಎಲ್ಲ ಸಿದ್ದತೆ ಮಾಡಿಕೊಂಡಿದ್ದಾರೆ. ಹಾಗಾಗಿ ಈ ತೀರ್ಪು ಟ್ರಂಪ್ 2024ರ ಅಧ್ಯಕ್ಷೀಯ ಚುನಾವಣೆಗೆ ನಿಲ್ಲುವುದನ್ನು ತಡೆಯಲಾಗುವುದಿಲ್ಲ ಎಂದು ವರದಿಯಾಗಿದೆ. 2014ರ ಅಧ್ಯಕ್ಷೀಯ ಚುನಾವಣೆ ವೇಳೆ ನೀಲಿಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್ ಅವರು ನಾನು ಟ್ರಂಪ್ ಜೊತೆ ಲೈಂಗಿಕ ಸಂಬಂಧ ಹೊಂದಿದ್ದೆ ಎಂದು ಹೇಳಿದ್ದರು. ಆದರೆ ಈ ಬಗ್ಗೆ ಹೇಳಿಕೆ ನೀಡದಂತೆ ಹಣ ನೀಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.