Select Your Language

Notifications

webdunia
webdunia
webdunia
webdunia

ಮಸೂದ್ ಅಜರ್ ಜಾಗತಿಕ ಉಗ್ರ ಎಂದು ಘೋಷಿಸಿದ ವಿಶ್ವಸಂಸ್ಥೆ

ಮಸೂದ್ ಅಜರ್ ಜಾಗತಿಕ ಉಗ್ರ ಎಂದು ಘೋಷಿಸಿದ ವಿಶ್ವಸಂಸ್ಥೆ
ಪಾಕಿಸ್ತಾನ , ಗುರುವಾರ, 2 ಮೇ 2019 (06:59 IST)
ಪಾಕಿಸ್ತಾನ : ಪಾಕಿಸ್ತಾನದ ಜೈಷ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಜಾಗತಿಕ ಉಗ್ರ ಎಂದು ಘೋಷಣೆ ಮಾಡಲಾಗಿದ್ದು, ಆ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ರಾಜತಾಂತ್ರಿಕ ಗೆಲುವು ಸಿಕ್ಕಿದೆ.




ಪುಲ್ವಾಮಾ ದಾಳಿಯ ಬಳಿಕ ಅಮೆರಿಕ, ಫ್ರಾನ್ಸ್, ಬ್ರಿಟನ್ ಮಸೂದ್ ಅಜರ್ ನನ್ನು ಜಾಗತಿಕ ಉಗ್ರರ ಪಟ್ಟಿಯಲ್ಲಿ ಸೇರಿಸಲು ವಿಶ್ವಸಂಸ್ಥೆಗೆ ಹೊಸ ಪ್ರಸ್ತಾವನೆ ಸಲ್ಲಿಸಿದ್ದವು. ಆದರೆ ಈ ಹಿಂದೆ 4 ಬಾರಿ ಮಸೂದ್ ಅಜರ್ ನನ್ನು ಜಾಗತಿಕ ಭಯೋತ್ಪಾದಕ ಪಟ್ಟಿಗೆ ಸೇರಿಸುವ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದ ಚೀನಾ ಸರಿಯಾದ ರೀತಿಯಲ್ಲಿ ಈ ವಿಷಯ ಪರಿಹರಿಸಲಾಗುವುದು ಎಂದು ಹೇಳಿತ್ತು.


ಇದೀಗ  ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆ ಭದ್ರತಾ ಮಂಡಳಿ ಘೋಷಣೆ ಮಾಡಿದೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ರಾಜತಾಂತ್ರಿಕ ಗೆಲುವು ಸಿಕ್ಕಿದಂತಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಗ್ರಾಹಕರಿಗೆ ಶಾಕ್; ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ