54 ವರ್ಷದ ಅಲಾಶೀದ್ ಅಲ್ಲಾಹ ಎಂಬಾತ ಸಬ್ ವೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಸಹ ಪ್ರಯಾಣಿಕರಾದ ಭಾರತೀಯ ಮೂಲದ ಅವನೀತ್ ಕೌರ್ ಎಂಬ 20 ರ ಹರೆಯದ ಯುವತಿ ನೀನು ಸಲಿಂಗಿ ಎಂದು ಹೀಯಾಳಿಸಿದ್ದಾನೆ. ಅಲ್ಲದೇ ಆಕೆಯನ್ನು ಹಿಂಬಾಲಿಸಿಕೊಂಡು ಹೋಗಿ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ.
ಈ ಕಾರಣದಿಂದ ಆಕೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿದ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಇದರ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಈ ದೇಶದಲ್ಲಿ ಯಾವುದೇ ಕಾರಣಕ್ಕೂ ಅಸಹಿಷ್ಣುತೆ ಹಾಗೂ ಲೈಂಗಿಕ ದೌರ್ಜನ್ಯವನ್ನು ಪ್ರೋತ್ಸಾಹಿಸುವ ಪ್ರಶ್ನೆಯೇ ಇಲ್ಲ ಎಂದು ಅಲಾಶೀದ್ ಅಲ್ಲಾಹ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.