Publish Date: Fri, 28 Oct 2022 (14:26 IST)
Updated Date: Fri, 28 Oct 2022 (14:31 IST)
ವಾಷಿಂಗ್ಟನ್ : ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲಾನ್ ಮಸ್ಕ್ ಟ್ವಿಟ್ಟರ್ ಕಂಪನಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಬೆನ್ನಲ್ಲೇ ಸಿಇಒ ಪರಾಗ್ ಅಗರ್ವಾಲ್ ಮತ್ತು ಅದರ ಉನ್ನತ ಅಧಿಕಾರಿಗಳನ್ನು ವಜಾಗೊಳಿಸಿದ್ದಾರೆ.
ಟ್ವಿಟರ್ ಸಿಇಒ ಪರಾಗ್ ಅಗರ್ವಾಲ್ ಜೊತೆ ಕಾನೂನು, ನೀತಿ ಮತ್ತು ಟ್ರಸ್ಟ್ ಮುಖ್ಯಸ್ಥರಾದ ವಿಜಯ ಗದ್ದೆ, ಮುಖ್ಯ ಹಣಕಾಸು ಅಧಿಕಾರಿ ನೆಡ್ ಸೆಗಲ್ ಸೇರಿದಂತೆ ಪ್ರಮುಖರನ್ನು ವಜಾ ಮಾಡಲಾಗಿದೆ ಎಂದು ವರದಿಯಾಗಿದೆ.