Select Your Language

Notifications

webdunia
webdunia
webdunia
webdunia

ರಗಾಸಾ ಚಂಡಮಾರುತಕ್ಕೆ ತೈವಾನ್‌ ತತ್ತರ: 124 ಮಂದಿ ಕಣ್ಮರೆ, 14 ಮಂದಿ ಸಾವು

Typhoon Ragasa, East Taiwan Area, Rescue Operation

Sampriya

ತೈವಾನ್‌ , ಬುಧವಾರ, 24 ಸೆಪ್ಟಂಬರ್ 2025 (14:50 IST)
Photo Credit X
ತೈವಾನ್‌: ರಗಾಸಾ ಚಂಡಮಾರುತಕ್ಕೆ ತೈವಾನ್‌ ತತ್ತರಿಸಿದೆ. ಚಂಡಮಾರುತದ ಪ್ರಭಾವರಿಂದ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 124 ಮಂದಿ ಕಣ್ಮರೆಯಾಗಿದ್ದಾರೆ.

ತೈವಾನ್‌ ಪೂರ್ವ ಪ್ರದೇಶದಲ್ಲಿ ಭಾರೀ ಮಳೆಯಾದ ನಂತರ ಭೂಕುಸಿತ ಉಂಟಾಗಿದೆ. ಮಂಗಳವಾರ ಸಾವಿನ ಸಂಖ್ಯೆ ಬುಧವಾರ 14ಕ್ಕೆ ಏರಿಕೆಯಾಗಿದೆ. ಈವರೆಗೆ 124 ಮಂದಿ ನಾಪತ್ತೆಯಾಗಿದ್ದಾರೆ. ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ನಡೆಸುತ್ತಿವೆ.  

ರಗಾಸಾ ಚಂಡಮಾರುತದ ಪರಿಣಾಮ ದಕ್ಷಿಣ ತೈವಾನ್‌ನಲ್ಲಿ ಭಾರೀ ಮಳೆಯಾಗುತ್ತಿದೆ. ಕಡಲತೀರದಲ್ಲಿ ಪ್ರವಾಹದಿಂದಾಗಿ ನೂರಾರು ಮರಗಳು ಧರೆಗುರುಳಿವೆ. ಹಲವು ಕಟ್ಟಡಗಳಿಗೆ ಹಾನಿಯಾಗಿವೆ. ದುರಂತದಲ್ಲಿ 18 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ಸೃಷ್ಟಿಸಿದೆ.

ದಕ್ಷಿಣ ಚೀನಾಕ್ಕೆ ರಾಗಸ ಚಂಡಮಾರುತ ಮಂಗಳವಾರ ಅಪ್ಪಳಿಸಿದೆ. ಇದರಿಂದಾಗಿ ಹಲವೆಡೆ ವ್ಯಾಪಕ ಮಳೆ ಸುರಿಯುತ್ತಿದೆ. ಚಂಡಮಾರುತ ಬುಧವಾರ ಹಾಂಗ್ ಕಾಂಗ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.

ವಿವಿಧೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಚೀನಾದ ದಕ್ಷಿಣ ಭಾಗದ ಕನಿಷ್ಠ 10 ನಗರಗಳಲ್ಲಿ ಕಚೇರಿಗಳು ಮತ್ತು ಶಾಲೆಗಳನ್ನು ಮುಚ್ಚುವಂತೆ ಅಧಿಕಾರಿಗಳು ಆದೇಶಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಹಾಲಿನ ದರ ಏರಿಕೆ ಬೆನ್ನಲ್ಲೇ ಸಾರಿಗೆ ಪ್ರಯಾಣಿಕರಿಗೆ ಶಾಕ್‌ ಕೊಡಲು ಮುಂದಾದ ರಾಜ್ಯ ಸರ್ಕಾರ