ರಗಾಸಾ ಚಂಡಮಾರುತಕ್ಕೆ ತೈವಾನ್‌ ತತ್ತರ: 124 ಮಂದಿ ಕಣ್ಮರೆ, 14 ಮಂದಿ ಸಾವು

Sampriya
ಬುಧವಾರ, 24 ಸೆಪ್ಟಂಬರ್ 2025 (14:50 IST)
Photo Credit X
ತೈವಾನ್‌: ರಗಾಸಾ ಚಂಡಮಾರುತಕ್ಕೆ ತೈವಾನ್‌ ತತ್ತರಿಸಿದೆ. ಚಂಡಮಾರುತದ ಪ್ರಭಾವರಿಂದ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 124 ಮಂದಿ ಕಣ್ಮರೆಯಾಗಿದ್ದಾರೆ.

ತೈವಾನ್‌ ಪೂರ್ವ ಪ್ರದೇಶದಲ್ಲಿ ಭಾರೀ ಮಳೆಯಾದ ನಂತರ ಭೂಕುಸಿತ ಉಂಟಾಗಿದೆ. ಮಂಗಳವಾರ ಸಾವಿನ ಸಂಖ್ಯೆ ಬುಧವಾರ 14ಕ್ಕೆ ಏರಿಕೆಯಾಗಿದೆ. ಈವರೆಗೆ 124 ಮಂದಿ ನಾಪತ್ತೆಯಾಗಿದ್ದಾರೆ. ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ನಡೆಸುತ್ತಿವೆ.  

ರಗಾಸಾ ಚಂಡಮಾರುತದ ಪರಿಣಾಮ ದಕ್ಷಿಣ ತೈವಾನ್‌ನಲ್ಲಿ ಭಾರೀ ಮಳೆಯಾಗುತ್ತಿದೆ. ಕಡಲತೀರದಲ್ಲಿ ಪ್ರವಾಹದಿಂದಾಗಿ ನೂರಾರು ಮರಗಳು ಧರೆಗುರುಳಿವೆ. ಹಲವು ಕಟ್ಟಡಗಳಿಗೆ ಹಾನಿಯಾಗಿವೆ. ದುರಂತದಲ್ಲಿ 18 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ಸೃಷ್ಟಿಸಿದೆ.

ದಕ್ಷಿಣ ಚೀನಾಕ್ಕೆ ರಾಗಸ ಚಂಡಮಾರುತ ಮಂಗಳವಾರ ಅಪ್ಪಳಿಸಿದೆ. ಇದರಿಂದಾಗಿ ಹಲವೆಡೆ ವ್ಯಾಪಕ ಮಳೆ ಸುರಿಯುತ್ತಿದೆ. ಚಂಡಮಾರುತ ಬುಧವಾರ ಹಾಂಗ್ ಕಾಂಗ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.

ವಿವಿಧೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಚೀನಾದ ದಕ್ಷಿಣ ಭಾಗದ ಕನಿಷ್ಠ 10 ನಗರಗಳಲ್ಲಿ ಕಚೇರಿಗಳು ಮತ್ತು ಶಾಲೆಗಳನ್ನು ಮುಚ್ಚುವಂತೆ ಅಧಿಕಾರಿಗಳು ಆದೇಶಿಸಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments