Select Your Language

Notifications

webdunia
webdunia
webdunia
webdunia

ಗಿನ್ನಿಸ್ ದಾಖಲೆ ಬರೆದ ವಿಶ್ವಸಂಸ್ಥೆ ಕೇಂದ್ರ ಕಚೇರಿ

ಗಿನ್ನಿಸ್ ದಾಖಲೆ ಬರೆದ ವಿಶ್ವಸಂಸ್ಥೆ ಕೇಂದ್ರ ಕಚೇರಿ
ನ್ಯೂಯಾರ್ಕ್ , ಶುಕ್ರವಾರ, 23 ಜೂನ್ 2023 (08:26 IST)
ನ್ಯೂಯಾರ್ಕ್ : ವಿಶ್ವ ಯೋಗ ದಿನದ ಅಂಗವಾಗಿ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಯೋಗಾಭ್ಯಾಸದಲ್ಲಿ ನೂರಕ್ಕೂ ಹೆಚ್ಚು ರಾಷ್ಟ್ರಗಳ ಜನರು ಭಾಗವಹಿಸಿ, ಗಿನ್ನಿಸ್ ದಾಖಲೆ ಬರೆದರು.

ಪ್ರಧಾನಿ ಮೋದಿ ಅವರು ಇದೇ ಮೊದಲ ಬಾರಿಗೆ ವಿದೇಶದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದರು. ಅಮೆರಿಕದ ನ್ಯೂಯಾರ್ಕ್ನಲ್ಲಿರುವ ವಿಶ್ವಸಂಸ್ಥೆ ಪ್ರಧಾನ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

ಮೊದಲಿಗೆ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಮೋದಿ ಬಳಿಕ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾದರು. ಮೋದಿ ಆಗಮಿಸುತ್ತಿದ್ದಂತೆ ಅಮೆರಿಕದಲ್ಲೂ `ಮೋದಿ.. ಮೋದಿ’ ಜಯಘೋಷ ಮೊಳಗಿತು. ವಸುದೈವ ಕುಟುಂಬಕಂ ಘೋಷದೊಂದಿಗೆ ನಡೆದ ಮೋದಿಯ ಯೋಗ ಯಾಗಕ್ಕೆ ವಿಶ್ವದ 135 ಕ್ಕೂ ಹೆಚ್ಚು ದೇಶಗಳ ಗಣ್ಯರು ಸಾಕ್ಷಿಯಾದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ತಪ್ಪದೇ ಚಾಲನೆ