Publish Date: Wed, 26 Apr 2023 (14:21 IST)
Updated Date: Wed, 26 Apr 2023 (14:22 IST)
ವಾಷಿಂಗ್ಟನ್ : ಇತ್ತೀಚೆಗೆ ವಿಮಾನಗಳಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಏರ್ ಇಂಡಿಯಾ, ಗೋ ಫಸ್ಟ್ ಬಳಿಕ ಅಮೆರಿಕನ್ ಏರ್ಲೈನ್ಸ್ ವಿಮಾನದಲ್ಲೂ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಅಮೆರಿಕನ್ ಏರ್ಲೈನ್ಸ್ನ ನ್ಯೂಯಾರ್ಕ್-ನವದೆಹಲಿ ವಿಮಾನದಲ್ಲಿ ಭಾರತದ ಪ್ರಯಾಣಿಕನೊಬ್ಬ ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ವಿಮಾನ ದೆಹಲಿಗೆ ಬಂದಿಳಿದ ನಂತರ ಆರೋಪಿಯನ್ನ ಸಿಐಎಸ್ಎಫ್ ಅಧಿಕಾರಿಗಳು ಬಂಧಿಸಿದ್ದಾರೆ.
ವಿಮಾನಯಾನ ಸಂಸ್ಥೆ ಸಹಪ್ರಯಾಣಿಕನ ಹೇಳಿಕೆಯನ್ನ ದಾಖಲಿಸಿಕೊಂಡಿದ್ದು, ಆರೋಪಿ ವಿರುದ್ಧ ನಾಗರಿಕ ವಿಮಾನಯಾನ ಕಾಯ್ದೆ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.