ಲಂಡನ್: ಇತ್ತೀಚೆಗೆ ಅಹ್ಮದಾಬಾದ್ ನಲ್ಲಿ ನಡೆದ ವಿಮಾನ ದುರಂತ ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಅಂತಹದ್ದೇ ವಿಮಾನ ದುರಂತ ಲಂಡನ್ ನಲ್ಲಿ ನಡೆದಿದೆ. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿದೆ.
ಲಂಡನ್ ನ ಸೌತೆಂಡ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ವಿಮಾನ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ವಿಮಾನದಿಂದ ದಟ್ಟ ಬೆಂಕಿ ಕಾಣಿಸಿಕೊಂಡಿದ್ದು ಕೆಲವೇ ಕ್ಷಣಗಳಲ್ಲಿ ಸುಟ್ಟು ಬೂದಿಯಾಗಿದೆ. ತಕ್ಷಣವೇ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ.
ಆದರೆ ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದು ಎಷ್ಟು ಜನರಿಗೆ ಹಾನಿಯಾಗಿದೆ ಎಂಬ ಬಗ್ಗೆ ಇನ್ನಷ್ಟೇ ಸ್ಪಷ್ಟ ಮಾಹಿತಿ ಬರಬೇಕಿದೆ. ಆದರೆ ವಿಮಾನ ಪತನಗೊಂಡ ತಕ್ಷಣ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಪ್ರಯಾಣಿಕರು ಬದುಕುಳಿಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
ವಿಮಾನ ಪತನವಾದ ಬೆನ್ನಲ್ಲೇ ಈ ವಿಮಾನ ನಿಲ್ದಾಣದಿಂದ ಹೊರಡುವ ವಿಮಾನಗಳನ್ನು ಕೆಲವು ಸಮಯದವರೆಗೆ ರದ್ದುಗೊಳಿಸಲಾಗಿದೆ. ಅಗ್ನಿಶಾಮಕ ದಳ, ವೈದ್ಯಕೀಯ ತಂಡ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ಭರದಿಂದ ತೊಡಗಿಸಿಕೊಂಡಿದೆ. ದುರಂತಕ್ಕೀಡಾದ ವಿಮಾನದ ವಿಡಿಯೋ ಇಲ್ಲಿದೆ ನೋಡಿ.