Select Your Language

Notifications

webdunia
webdunia
webdunia
webdunia

ರಷ್ಯಾ-ಉಕ್ರೇನ್ ಯುದ್ಧದ ವಿಚಾರದಲ್ಲಿ ನಾವು ತಟಸ್ಥವಾಗಿಲ್ಲ: ನರೇಂದ್ರ ಮೋದಿ

ರಷ್ಯಾ-ಉಕ್ರೇನ್ ಯುದ್ಧದ ವಿಚಾರದಲ್ಲಿ ನಾವು ತಟಸ್ಥವಾಗಿಲ್ಲ: ನರೇಂದ್ರ ಮೋದಿ
ವಾಷಿಂಗ್ಟನ್ , ಬುಧವಾರ, 21 ಜೂನ್ 2023 (06:25 IST)
ವಾಷಿಂಗ್ಟನ್ : ರಷ್ಯಾ-ಉಕ್ರೇನ್ ಯುದ್ಧದ ವಿಚಾರದಲ್ಲಿ ನಾವು ತಟಸ್ಥವಾಗಿಲ್ಲ. ನಾವು ಶಾಂತಿಯ ಕಡೆ ನಿಲ್ಲುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

 
ವಿಶೇಷ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ವಿಶೇಷ ವಿಮಾನದ ಮೂಲಕ ಅವರು ನ್ಯೂಯಾರ್ಕ್ ತಲುಪಿದ್ದಾರೆ. ಇದಕ್ಕೂ ಮುನ್ನ ಅಮೆರಿಕದ ವಾಲ್ಸ್ಟ್ರೀಟ್ ಜರ್ನಲ್ ಪತ್ರಿಕೆಗೆ ಸಂದರ್ಶನ ನೀಡಿದ ಮೋದಿ, ರಷ್ಯಾ-ಉಕ್ರೇನ್ ಯುದ್ಧದ ವಿಚಾರದಲ್ಲಿ ನಾವು ತಟಸ್ಥವಾಗಿಲ್ಲ. ನಾವು ಶಾಂತಿಯ ಕಡೆ ನಿಲ್ಲುತ್ತೇವೆ. ಯುದ್ಧ ನಿಲ್ಲಿಸಲು ಭಾರತ ಮಾಡಬೇಕಾದ ಎಲ್ಲಾ ಪ್ರಯತ್ನಗಳನ್ನು ಮಾಡಿದೆ ಎಂದಿದ್ದಾರೆ.

ಭಾರತ-ಚೀನಾ ಸಂಬಂಧದ ಬಗ್ಗೆ ಪ್ರಸ್ತಾಪಿಸುತ್ತಾ, ಯಾವುದೇ ದೇಶಗಳ ನಡುವೆ ದ್ವಿಪಕ್ಷೀಯ ಬಾಂಧವ್ಯ ಇರಬೇಕು ಎಂದರೆ ಗಡಿಯಲ್ಲಿ ಶಾಂತಿಯುತ ವಾತಾವರಣ ಇರುವುದು ಮುಖ್ಯ. ಭಾರತ-ಅಮೆರಿಕ ಬಂಧ ಹಿಂದೆಂದಿಗಿಂತಲೂ ಬಲವಾಗಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ. ಸ್ವಾತಂತ್ರ್ಯ ಭಾರತದಲ್ಲಿ ಹುಟ್ಟಿದ ಮೊದಲ ಪ್ರಧಾನಿ ನಾನು. ಅದಕ್ಕೆ ನನ್ನ ಆಲೋಚನೆಗಳು ದೇಶದ ಇತಿಹಾಸ, ಸಂಪ್ರದಾಯಗಳಿಂದ ಪ್ರೇರಣೆ ಹೊಂದಿವೆ ಎಂದು ಪ್ರಧಾನಿ ಹೇಳಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಪರಿಷತ್ ಅಭ್ಯರ್ಥಿ ಗಳ ನಾಮ ಪತ್ರ ಸಲ್ಲಿಕೆ