ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಧಾನಿ ಮೋದಿ ಫೋನ್ ಮಾತುಕತೆಯಲ್ಲಿ ಅಂಥದ್ದೆನು ನಡೆಯಿತು

Krishnaveni K
ಮಂಗಳವಾರ, 28 ಜನವರಿ 2025 (12:26 IST)
ನವದೆಹಲಿ: ಅಮೆರಿಕಾದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಡೊನಾಲ್ಡ್ ಟ್ರಂಪ್ ಜೊತೆ ಪ್ರಧಾನಿ ಮೋದಿ ಫೋನ್ ಇನ್ ಮಾತುಕತೆ ಈಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಟ್ರಂಪ್ ಈ ಹಿಂದೆ ಅಧ್ಯಕ್ಷರಾಗಿದ್ದಾಗ ಭಾರತಕ್ಕೆ ಭೇಟಿ ನೀಡಿದ್ದರು. ಮೋದಿ ನನ್ನ ಅತ್ಯುತ್ತಮ ಸ್ನೇಹಿತ ಎಂದೇ ಟ್ರಂಪ್ ಹೇಳುತ್ತಾ ಬಂದಿದ್ದಾರೆ. ಇದೀಗ ಟ್ರಂಪ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಇಬ್ಬರೂ ಫೋನ್ ಮೂಲಕ ಮಾತುಕತೆ ನಡೆಸಿದ್ದಾರೆ. ಇದರ ಬಗ್ಗೆ ಸ್ವತಃ ಟ್ರಂಪ್ ಹೇಳಿಕೆ ನೀಡಿದ್ದಾರೆ.

ನನ್ನ ಅತ್ಯಂತ ಆತ್ಮೀಯ ಮಿತ್ರ ಮೋದಿಯವರ ಜೊತೆ ಮಾತುಕತೆ ನಡೆಸಿದ್ದೇನೆ. ಅಮೆರಿಕಾದಲ್ಲಿ ನೆಲೆಸಿರುವ ಸುಮಾರು 18 ಸಾವಿರ ಭಾರತದ ಅಕ್ರಮ ವಲಸಿಗರ ಬಗ್ಗೆ ಏನು ತೀರ್ಮಾನ ತೆಗೆದುಕೊಳ್ಳಬೇಕೆಂದು ಮೋದಿಯವರಿಗೆ ಚೆನ್ನಾಗಿ ಗೊತ್ತಿದೆ ಎಂದಿದ್ದಾರೆ. ಅವರ ಈ ಮಾತು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಟ್ರಂಪ್ ಅಧಿಕಾರಕ್ಕೇರಿದ ಬೆನ್ನಲ್ಲೇ ಅಮೆರಿಕಾದಲ್ಲಿ ನೆಲೆಸಿರುವ ಅಕ್ರಮ ವಲಸಿಗರನ್ನು ಹೊರಹಾಕುವ ಕೆಲಸ ನಡೆಯುತ್ತಿದೆ. ಇದರ ಬೆನ್ನಲ್ಲೇ ಮೋದಿ ಜೊತೆ ಮಾತುಕತೆ ನಡೆಸಿ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲ, ಮೋದಿ ಫೆಬ್ರವರಿಯಲ್ಲಿ ಅಮೆರಿಕಾಗೆ ಭೇಟಿ ನೀಡಲಿದ್ದಾರೆ ಎಂದೂ ಹೇಳಿದ್ದಾರೆ. ಮೂಲಗಳ ಪ್ರಕಾರ ಮೋದಿ ವೈಟ್ ಹೌಸ್ ಗೂ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments