ಮುಂಬೈ : ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ ಅವರು,
ಗುವಾಹಟಿಯ ಹೋಟೆಲ್ನಲ್ಲಿ ತಂಗಿರುವ ಕೆಲವು ಬಂಡಾಯ ಶಾಸಕರ ಪತ್ನಿಯರನ್ನು ಸಂಪರ್ಕಿಸಿ ಅವರ ಪತಿಯೊಂದಿಗೆ ಮಾತನಾಡಿ ಮನವೊಲಿಸುವಂತೆ ಕೇಳಿಕೊಂಡಿದ್ದಾರೆ.
ಶನಿವಾರ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಶಿವಸೇನೆಯ ಯಾವುದೇ ಶಾಸಕನಿಗೂ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಹೆಸರನ್ನು ಬಳಸಲು ಬಿಡುವುದಿಲ್ಲ. ಬಂಡಾಯ ಶಾಸಕರು ಅವರ ತಂದೆಯ ಹೆಸರಿನಲ್ಲೇ ಚುನಾವಣೆ ಎದುರಿಸಲಿ.
ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಬಾಳಾಸಾಹೇಬ್ ಠಾಕ್ರೆ ಹೆಸರು ಬಳಸಿಕೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈ ಸಂಬಂಧ ಶಿವಸೇನಾ ಪಕ್ಷವು ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಿದೆ ಎಂದು ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದರು.