Select Your Language

Notifications

webdunia
webdunia
webdunia
webdunia

ಪೋರ್ಚುಗಲ್‍ನ ಆರೋಗ್ಯ ಸಚಿವೆ ರಾಜೀನಾಮೆ ಕೊಟ್ಟಿದ್ದಾದ್ರು ಯಾಕೆ?

ಪೋರ್ಚುಗಲ್‍ನ ಆರೋಗ್ಯ ಸಚಿವೆ ರಾಜೀನಾಮೆ ಕೊಟ್ಟಿದ್ದಾದ್ರು ಯಾಕೆ?
ಲಿಸ್ಬನ್ , ಗುರುವಾರ, 1 ಸೆಪ್ಟಂಬರ್ 2022 (14:24 IST)
ಲಿಸ್ಬನ್ : ಭಾರತೀಯ ಗರ್ಭಿಣಿ ಪ್ರವಾಸಿಯೊಬ್ಬರು ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯತೆಯಿಲ್ಲದೇ ಪೋರ್ಚುಗಲ್ನಲ್ಲಿ ಸಾವನ್ನಪ್ಪಿದ್ದಾರೆ.
 
ಈ ಹಿನ್ನೆಲೆಯಲ್ಲಿ ಅಲ್ಲಿನ ಆರೋಗ್ಯ ಸಚಿವೆ ಮಾರ್ಟಾ ಟೆಮಿಡೊ ರಾಜೀನಾಮೆ ನೀಡಿದ್ದಾರೆ. ತುರ್ತು ಪ್ರಸೂತಿ ಸೇವೆಗಳನ್ನು ತಾತ್ಕಾಲಿಕವಾಗಿ ಮುಚ್ಚಿದ್ದರಿಂದಾಗಿ ಹಾಸಿಗೆಯ ಕೊರತೆ ಉಂಟಾಗಿತ್ತು.

ಇದರಿಂದಾಗಿ 34 ವರ್ಷದ ಭಾರತೀಯ ಗರ್ಭಿಣಿಯನ್ನು ಬೇರೆ ಆಸ್ಪತ್ರೆಗೆ ವರ್ಗಾಯಿಸುವ ಸಮಯದಲ್ಲಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರವು ತೀವ್ರ ಟೀಕೆಗೆ ಒಳಗಾಗಿದೆ. ಹೀಗಾಗಿ ಆರೋಗ್ಯ ಸಚಿವೆ ರಾಜೀನಾಮೆ ನೀಡಿದ್ದಾರೆ.

ಈ ವೇಳೆ ಆರೋಗ್ಯ ಸಚಿವೆ ಮಾರ್ಟಾ ಟೆಮಿಡೊ ಮಾತನಾಡಿ, ಇನ್ನೂ ಮುಂದೆ ಯಾವುದೇ ಷರತ್ತುಗಳನ್ನು ಹೊಂದಿಲ್ಲ. ರಾಜೀನಾಮೆಯನ್ನು ಪ್ರಧಾನಮಂತ್ರಿ ಅವರು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು. ಈ ರಾಜೀನಾಮೆಯನ್ನು ಲಿಸ್ಬನ್ನಲ್ಲಿ ಗರ್ಭಿಣಿ ಸಾವನ್ನಪ್ಪಿದ 5 ಗಂಟೆಯ ನಂತರ ಘೋಷಿಸಲಾಗಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಆಯಂಬುಲೆನ್ಸ್ ಚಾಲಕನ ಅವಾಂತರ..!!!