Publish Date: Thu, 08 Oct 2020 (23:10 IST)
Updated Date: Thu, 08 Oct 2020 (23:12 IST)
ಅಮೆರಿಕಾದಲ್ಲಿ ಕೊರೊನಾ ವೈರಸ್ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಕೊರೊನಾ ಕಾಣಿಸಿಕೊಂಡಿದ್ದು ಚಿಕಿತ್ಸೆ ನಡೆಯುತ್ತಿದೆ.
ಮತ್ತೊಂದೆಡೆ ಅಮೆರಿಕಾದಲ್ಲಿ ಚುನಾವಣೆ ನಡೆಯುತ್ತಿದ್ದು, ಈ ವೇಳೆ ಮತ್ತೊಮ್ಮೆ ಚೀನಾ ವಿರುದ್ಧ ಟ್ರಂಪ್ ವಾಗ್ದಾಳಿ ನಡೆಸಿದ್ದಾರೆ.
ಕೊರೊನಾ ವೈರಸ್ ವಿಷಯದಲ್ಲಿ ಚೀನಾ ಅತೀ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿಕೆ ನೀಡಿದ್ದಾರೆ.
ಕೊರೊನಾ ಪಾಸಿಟಿವ್ ಬಂದಿರೋದು ದೇವರ ಆಶೀರ್ವಾದ ಎಂದಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರೋಗ ತಡೆಗೆ ಬಳಸುವ ಔಷಧ, ಚಿಕಿತ್ಸೆಯ ಬಗ್ಗೆ ಸಂಪೂರ್ಣ ಮಾಹಿತಿ ಸಿಕ್ಕಂತಾಗಿದೆ ಎಂದಿದ್ದಾರೆ.