ಕೋಲ್ಕೊತ್ತಾ: ಟೀಂ ಇಂಡಿಯಾಕ್ಕೆ ಮೊದಲ ಟಿ-ಟ್ವೆಂಟಿ ವಿಶ್ವಕಪ್ ಗೆದ್ದುಕೊಟ್ಟ ನಾಯಕ ಧೋನಿ ಈ ಮಾದರಿಯ ಉತ್ತಮ ಆಟಗಾರನಲ್ಲ ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.
ಧೋನಿ ಏಕದಿನ ಮಾದರಿಯಲ್ಲಿ ಚಾಂಪಿಯನ್ ಆಟಗಾರ ಎನ್ನುವುದರಲ್ಲಿ ಅನುಮಾನವಿಲ್ಲ. ಆದರೆ ಟಿ-ಟ್ವೆಂಟಿ ಮಾದರಿಯಲ್ಲಿ ಬೆಸ್ಟ್ ಪ್ಲೇಯರ್ ಹೌದೇ ಎನ್ನುವುದು ನನಗೆ ಅನುಮಾನ ಎಂದಿದ್ದಾರೆ ಗಂಗೂಲಿ.
ಗಂಗೂಲಿ ಹೇಳಿಕೆಗೆ ಸಮರ್ಥಿಸುವಂತೆ ಧೋನಿ ಇದುವರೆಗೆ ಕಿರು ಮಾದರಿಯಲ್ಲಿ ಹೇಳಿಕೊಳ್ಳುವಂತಹ ಇನಿಂಗ್ಸ್ ಆಡಿಲ್ಲ. ಆದರೆ ಏಕದಿನ ಪಂದ್ಯಗಳಲ್ಲಿ ಅವರು ಹಲವು ಪಂದ್ಯ ಗೆಲ್ಲಿಸಿಕೊಟ್ಟಿದ್ದಾರೆ. ಅವರೊಬ್ಬ ಚಾಂಪಿಯನ್ ಎನ್ನುವುದರಲ್ಲಿ ಸಂಶಯವೇ ಇಲ್ಲ ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ