ಐಪಿಎಲ್: ಆರ್ ಸಿಬಿಗೆ ಸಾಲು ಸಾಲು ಸೋಲು

Webdunia
ಶುಕ್ರವಾರ, 28 ಏಪ್ರಿಲ್ 2017 (07:49 IST)
ಬೆಂಗಳೂರು: ಯಾಕೋ ಈ ಬಾರಿಯ ಐಪಿಎಲ್ ನಲ್ಲಿ ಬೆಂಗಳೂರು ಹುಡುಗರು ಮೇಲೇಳುವ ಲಕ್ಷಣವೇ ಕಾಣುತ್ತಿಲ್ಲ. ನಿನ್ನೆ ನಡೆದ ಪಂದ್ಯದಲ್ಲಿ ಗುಜರಾತ್ ಲಯನ್ಸ್ 7 ವಿಕೆಟ್ ಗಳಿಂದ ಆರ್ ಸಿಬಿಗೆ ಸೋಲುಣಿಸಿತು.

 
ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ ಆರಂಭದ ಅಗ್ರ ಬ್ಯಾಟ್ಸ್ ಮನ್ ಗಳನ್ನು ಬಹು ಬೇಗನೇ ಕಳೆದುಕೊಂಡಿತು. ಕೊಹ್ಲಿ ಕೇವಲ 10 ರನ್ ಗಳಿಸಿ ಔಟಾದರು. ಮೊದಲ 10 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಕೇವಲ 61 ರನ್ ಗಳಿಸಿತಷ್ಟೇ. ಹೀಗಾಗಿ ನಿಗದಿತ 20 ಓವರ್ ಗಳಲ್ಲಿ 134 ರನ್ ಗಳಿಸಿ ಆಲೌಟ್ ಆಯಿತು.

ಈ ಮೊತ್ತ ಯಾತಕ್ಕೂ ಸಾಲಲಿಲ್ಲ. ಆರಂಭದಲ್ಲಿ ಗುಜರಾತ್ ಕೂಡಾ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಯಿತಾದರೂ, ನಂತರ ಏರಾನ್ ಫಿಂಚ್ ಅಬ್ಬರದ ಮುಂದೆ ಆರ್ ಸಿಬಿ ಮಕಾಡೆ ಮಲಗಿತು. ಫಿಂಚ್ 34 ಎಸೆತಗಳಲ್ಲಿ72 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಇದರಿಂದಾಗಿ ಆರ್ ಸಿಬಿ ತವರಿನಲ್ಲೇ ಮತ್ತೊಂದು ಸೋಲಿನತ್ತ ಮುಖ ಮಾಡಿತು. ಇದೀಗ ಅಂಕ ಪಟ್ಟಿಯಲ್ಲಿ ಕೊನೆಯ ಸಾಲಿನಿಂದ ದ್ವಿತೀಯ ಸ್ಥಾನದಲ್ಲಿದೆ. 9 ಪಂದ್ಯಗಳನ್ನಾಡಿರುವ ಆರ್ ಸಿಬಿಗೆ ದಕ್ಕಿದ್ದು ಕೇವಲ ಎರಡೇ ಗೆಲುವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments