ಬೆಂಗಳೂರು: ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಈ ಬಾರಿಯ ಐಪಿಎಲ್ ನಲ್ಲಿ ತೀವ್ರ ನಿರಾಸೆ ತಂದಿದೆ. ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಬಿಗ್ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಗಾಯಮಾಡಿಕೊಂಡಿದ್ದ ನಾಯಕ ಕೊಹ್ಲಿ ಹಾಗೂ ಕೆಎಲ್ ರಾಹುಲ್ ತಂಡದಿಂದ ಹೊರಗುಳಿಯಲಿದ್ದಾರೆ. ರಾಹುಲ್ ಕೂಡಾ ಭುಜದ ಗಾಯಕ್ಕೆ ತುತ್ತಾಗಿದ್ದಾರೆ. ಇದರಿಂದಾಗಿ ಐಪಿಎಲ್ ಆರಂಭಕ್ಕೂ ಮೊದಲೇ ತವರಿನ ತಂಡಕ್ಕೆ ಬಿಗ್ ಲಾಸ್ ಆಗಿದೆ.
ಕೊಹ್ಲಿ ಬದಲಿಗೆ ರಾಯಲ್ಸ್ ಚಾಲೆಂಜರ್ಸ್ ತಂಡವನ್ನು ಡಿ ವಿಲಿಯರ್ಸ್ ಮುನ್ನಡೆಸಲಿದ್ದಾರೆ. ರಾಹುಲ್ ಲಂಡನ್ ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ ಎಂದು ವರದಿಗಳು ಹೇಳಿವೆ. ರಾಹುಲ್ ಈ ಆವೃತ್ತಿಯಲ್ಲಿ ಪಾಲ್ಗೊಳ್ಳಲಾರರು. ಆದರೆ ಕೊಹ್ಲಿ ಕೊನೆಯ ಪಂದ್ಯಗಳಿಗೆ ಲಭ್ಯರಿರುತ್ತಾರೋ ಏನೋ ಎಂದು ಕಾದು ನೋಡಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ