Select Your Language

Notifications

webdunia
webdunia
webdunia
webdunia

ಐಪಿಎಲ್: ಡೆಲ್ಲಿ ರೈಸಿಂಗ್! ಧೋನಿ ಶೈನಿಂಗ್!

ಐಪಿಎಲ್: ಡೆಲ್ಲಿ ರೈಸಿಂಗ್! ಧೋನಿ ಶೈನಿಂಗ್!
ನವದೆಹಲಿ , ಸೋಮವಾರ, 15 ಏಪ್ರಿಲ್ 2019 (08:27 IST)
ನವದೆಹಲಿ: ನಿನ್ನೆ ನಡೆದ ಐಪಿಎಲ್ ಪಂದ್ಯಗಳ ಪೈಕಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ, ಕೋಲ್ಕೊತ್ತಾ ನೈಟ್ ರೈಡರ್ಸ್ ಪರ ಚೆನ್ನೈ ಗೆಲುವು ದಾಖಲಿಸಿದೆ.


ಮೊದಲು ನಡೆದ ಪಂದ್ಯದಲ್ಲಿ ಧೋನಿ ನೇತೃತ್ವದ ಸಿಎಸ್ ಕೆ ಕೆಕೆಆರ್ ನ್ನು 5 ವಿಕೆಟ್ ಗಳಿಂದ ಸೋಲಿಸಿತು. ಕೆಕೆಆರ್ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತ್ತು. ಚೆನ್ನೈ ಪರ ಇಮ್ರಾನ್ ತಾಹಿರ್ 4 ವಿಕೆಟ್ ಕಿತ್ತು ಪಂದ್ಯ ಶ್ರೇಷ್ಠರಾದರು. ಇದರೊಂದಿಗೆ ಧೋನಿ ತಂಡ ಸೋಲರಿಯದ ಸರದಾರನಾಗಿ ಮುಂದುವರಿದಿದೆ.

ಇನ್ನೊಂದು ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಹೈದರಾಬಾದ್ 18.5 ಓವರ್ ಗಳಲ್ಲಿ ಕೇವಲ 116 ರನ್ ಗಳಿಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಟೀಂ ಇಂಡಿಯಾ ವಿಶ್ವಕಪ್ ತಂಡ ಪ್ರಕಟ: ಕೆಎಲ್ ರಾಹುಲ್ ಎದೆಯಲ್ಲಿ ಢವ ಢವ