ಮುಂಬೈ: ನಿನ್ನೆ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ 37 ರನ್ ಗಳಿಂದ ಸೋಲುವುದರೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೂಟದ ಮೊದಲ ಸೋಲುಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ನಿಗದಿತ 20 ಓವರ್ ಗಳಲ್ಲಿ 170 ರನ್ ಗಳಿಸಿತು. ಮುಂಬೈ ಪರ ಸೂರ್ಯಕುಮಾರ್ ಯಾದವ್ (53 ರನ್), ಕೃಣಾಲ್ ಪಾಂಡ್ಯ 42 ರನ್ ಮತ್ತು ಹಾರ್ದಿಕ್ ಪಾಂಡ್ಯ 25 ರನ್ ಗಳಿಸಿದರು.
ಗೆಲುವಿನ ಗುರಿ ಬೆನ್ನಟ್ಟಿದ ಚೆನ್ನೈ ಆರಂಭವೇ ಉತ್ತಮವಾಗಿರಲಿಲ್ಲ. ಮಧ್ಯಮ ಕ್ರಮಾಂಕವೂ ವಿಫಲವಾದ್ದರಿಂದ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಲಷ್ಟೇ ಶಕ್ತವಾಯಿತು. 12 ಗಳಿಸಿದ ಧೋನಿ ಚೆನ್ನೈ ಪರ 4000 ರನ್ ಪೂರೈಸಿದ ದಾಖಲೆ ಮಾಡಿದರು. ಕೇದಾರ್ ಜಾಧವ್ 58 ರನ್ ಗಳಿಸಿದ್ದು ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವಂತಹ ಸಾಧನೆ ಬರಲಿಲ್ಲ. ಹೀಗಾಗಿ ಚೆನ್ನೈ ಸೋಲು ಕಂಡಿತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ