Select Your Language

Notifications

webdunia
webdunia
webdunia
webdunia

ಐಪಿಎಲ್: ಆರ್ ಸಿಬಿ ಸೋಲಿಸಿ ನೃತ್ಯ ಮಾಡಿ ಸಂಭ್ರಮಿಸಿದ ಶಿಖರ್ ಧವನ್

ಐಪಿಎಲ್: ಆರ್ ಸಿಬಿ ಸೋಲಿಸಿ ನೃತ್ಯ ಮಾಡಿ ಸಂಭ್ರಮಿಸಿದ ಶಿಖರ್ ಧವನ್
ನವದೆಹಲಿ , ಸೋಮವಾರ, 29 ಏಪ್ರಿಲ್ 2019 (08:47 IST)
ನವದೆಹಲಿ: ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 16 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಸಿದೆ.


ಈ ಗೆಲುವಿನ ಸಂಭ್ರಮವನ್ನು ಡೆಲ್ಲಿ ಆಟಗಾರ ಶಿಖರ್ ಧವನ್ ನೃತ್ಯ ಮಾಡಿ ಸಂಭ್ರಮಿಸಿದರೆ, ಸಹ ಆಟಗಾರರೂ ಅವರಿಗೆ ಸಾಥ್ ನೀಡಿದ್ದಾರೆ. ಅವರ ಈ ಸಂಭ್ರಮಕ್ಕೆ ಕಾರಣವೂ ಇಲ್ಲದಿಲ್ಲ. ಈ ಗೆಲುವಿನೊಂದಿಗೆ ಡೆಲ್ಲಿ ಪ್ಲೇ ಆಫ್ ಹಂತಕ್ಕೆ ಅರ್ಹತೆ ಪಡೆಯಿತು. ಹೀಗಾಗಿಯೇ ಡೆಲ್ಲಿ ಆಟಗಾರರ ಖುಷಿ ಹೆಚ್ಚಾಗಿತ್ತು.

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 5 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಲಷ್ಟೇ ಶಕ್ತವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈ ಇಂಡಿಯನ್ಸ್ ನಿಂದ ನಯಾ ಪೈಸೆ ಪಡೀತಿಲ್ಲ ಎಂದ ಸಚಿನ್ ತೆಂಡುಲ್ಕರ್