ಮೊಹಾಲಿ: ಕನ್ನಡಿಗರಾದ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಜೋಡಿಯ ಭರ್ಜರಿ ಬ್ಯಾಟಿಂಗ್ ನಿಂದಾಗಿ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 6 ವಿಕೆಟ್ ಗಳ ಗೆಲುವು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ಡೇವಿಡ್ ವಾರ್ನರ್ ಅರ್ಧಶತಕದ (70) ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿತು.
ಈ ಮೊತ್ತ ಬೆನ್ನಟ್ಟಿದ ಪಂಜಾಬ್ ಗೆ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಜತೆಯಾದರು. ಈ ಕುಚಿಕು ಗೆಳೆಯರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಪಂಜಾಬ್ 19.5 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿತು. ಇದರಲ್ಲಿ ರಾಹುಲ್ 53 ಎಸೆತಗಳಲ್ಲಿ ಅಜೇಯ 71 ರನ್ ಗಳಿಸಿದರೆ ಮಯಾಂಕ್ 43 ಎಸೆತಗಳಲ್ಲಿ 55 ರನ್ ಬಾರಿಸಿದರು..
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ