ಐಪಿಎಲ್: ಕನ್ನಡಿಗನಿಂದಲೇ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು

Webdunia
ಬುಧವಾರ, 3 ಏಪ್ರಿಲ್ 2019 (09:29 IST)
ಜೈಪುರ: ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಮತ್ತೆ ರಾಯಲ್‍ ಚಾಲೆಂಜರ್ಸ್‍ ಬೆಂಗಳೂರು ಸೋತಿದೆ. ವಿಶೇಷವೆಂದರೆ ಇದುವರೆಗೆ ಒಂದೂ ಗೆಲುವು ಕಾಣದ ಆರ್ ಸಿಬಿ ನಿನ್ನೆಯಂತೂ ಕನ್ನಡಿಗನಿಂದಲೇ ಸೋತಿದೆ!


ಆ ಕನ್ನಡಿಗ ಆಟಗಾರ ಶ್ರೇಯಸ್ ಗೋಪಾಲ್. ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಶ್ರೇಯಸ್ 4 ಓವರ್ ಗಳಲ್ಲಿ ಕೇವಲ 12 ರನ್ ನೀಡಿ 3 ವಿಕೆಟ್ ಕಬಳಿಸಿದರು. ರಣಜಿ ಟ್ರೋಫಿಯಲ್ಲಿ ಕರ್ನಾಟಕ ಪರ ಭರ್ಜರಿ ಆಟವಾಡುವ ಶ್ರೇಯಸ್ ನಿನ್ನೆ ಬೆಂಗಳೂರು ತಂಡವನ್ನೇ ಸೋಲಿಸಿದರು. ಶ್ರೇಯಸ್ ಬೆನ್ನು ಬೆನ್ನಿಗೆ ಎಬಿಡಿ ವಿಲಿಯರ್ಸ್, ಹೆಟ್ ಮೇರ್ ವಿಕೆಟ್ ಕಬಳಿಸಿದ್ದು, ಆರ್ ಸಿಬಿಗೆ ರನ್ ಗಳಿಸಲು ಕಷ್ಟವಾಯಿತು.

ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತ್ತು. ಆರಂಭಿಕ ಪಾರ್ಥಿವ್ ಪಟೇಲ್ 67, ನಾಯಕ ವಿರಾಟ್ ಕೊಹ್ಲಿ 23 ಮತ್ತು ಮೊಯಿನ್ ಅಲಿ ಔಟಾಗದೇ 31 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ಎಚ್ಚರಿಕೆಯ ಆಟವಾಡುತ್ತಲೇ 19.5 ಓವರ್ ನಲ್ಲಿ 1`64 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಇದು ರಾಜಸ್ಥಾನಕ್ಕೆ ಈ ಆವೃತ್ತಿಯಲ್ಲಿ ಮೊದಲ ಗೆಲುವಾಗಿದೆ. ರಾಜಸ್ಥಾನ್ ಪರ ಜೋಸ್ ಬಟ್ಲರ್, ಸ್ಟೀವ್ ಸ್ಮಿತ್, ರಾಹುಲ್ ತ್ರಿಪಾಠಿ ಅಜೇಯ 34 ರನ್ ಗಳಿಸಿದರು. ಆರ್ ಸಿಬಿ ಪರ ಯಜುವೇಂದ್ರ ಚಾಹಲ್ 2 ವಿಕೆಟ್ ಕಬಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments