ಮುಂಬೈ: ಐಪಿಎಲ್ ಮುಗಿದ ಮೇಲೆ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾದ ಕ್ವಾರಂಟೈನ್ ಅವಧಿ ಕಡಿತಗೊಳಿಸಬೇಕೆಂದು ಬಿಸಿಸಿಐ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಜತೆ ಚೌಕಾಸಿ ನಡೆಸಿದೆ.
ಈ ಮೊದಲೊಮ್ಮೆ ಬಿಸಿಸಿಐ ಕ್ರಿಕೆಟ್ ಆಸ್ಟ್ರೇಲಿಯಾಗೆ ಇದೇ ವಿಚಾರವಾಗಿ ಮನವಿ ಮಾಡಿತ್ತು. ಆದರೆ ಅಲ್ಲಿನ ಕ್ರಿಕೆಟ್ ಮಂಡಳಿ ಕಡ್ಡಾಯ ಎರಡು ವಾರಗಳ ಕ್ವಾರಂಟೈನ್ ಅವಧಿ ಮುಗಿಸಲೇಬೇಕೆಂದಿತ್ತು. ಇದೀಗ ಮತ್ತೆ ಬಿಸಿಸಿಐ ಮಾತುಕತೆ ನಡೆಸುತ್ತಿರುವುದಾಗಿ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಮುಂದಿನ ತಿಂಗಳು ಆಸ್ಟ್ರೇಲಿಯಾ ಪ್ರವಾಸ ಮಾಡಲಿರುವ ಟೀಂ ಇಂಡಿಯಾ ಜೈವಿಕ ಸುರಕ್ಷಾ ವಲಯದಲ್ಲಿ ಕ್ರಿಕೆಟ್ ಸರಣಿ ಆಡಲಿದೆ.