ಐಪಿಎಲ್ 13: ಕೆಕೆಆರ್, ಕಿಂಗ್ಸ್ ಪಂಜಾಬ್ ಗೆ ಗೆಲುವು

Webdunia
ಭಾನುವಾರ, 25 ಅಕ್ಟೋಬರ್ 2020 (09:05 IST)
ದುಬೈ: ಐಪಿಎಲ್ 13 ರಲ್ಲಿ ಶನಿವಾರದ ಎರಡು ಪಂದ್ಯಗಳಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ಗೆಲುವು ಸಾಧಿಸಿದೆ. ಇದರೊಂದಿಗೆ ಈ ಎರಡೂ ತಂಡಗಳು ಪ್ಲೇ ಆಫ್ ಹಂತದ ಕನಸು ಜೀವಂತವಾಗಿರಿಸಿದೆ.

 

ಮೊದಲ ಪಂದ್ಯದಲ್ಲಿ ಕೆಕೆಆರ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ 59 ರನ್ ಗಳ ಗೆಲುವು ಸಾಧಿಸಿತು.

ಎರಡನೆಯ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ರೋಚಕ 12 ರನ್ ಗಳ ಜಯ ಸಾಧಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಲಷ್ಟೇ ಶಕ್ತವಾಯಿತು. ಹೀಗಾಗಿ ಈ ಮೊತ್ತವನ್ನು ಹೈದರಾಬಾದ್ ಸುಲಭವಾಗಿ ಬೆನ್ನತ್ತಬಹುದು ಎಂಬುದೇ ಎಲ್ಲರ ಲೆಕ್ಕಾಚಾರವಾಗಿತ್ತು. ಕ್ರಿಸ್ ಜೋರ್ಡಾನ್ ಮತ್ತು ಅರ್ಶ್ ದೀಪ್ ಸಿಂಗ್ (ತಲಾ 3 ವಿಕೆಟ್) ಮಾರಕ ದಾಳಿಗೆ ತತ್ತರಿಸಿದ ಹೈದರಾಬಾದ್ 19.5 ಓವರ್ ಗಳಲ್ಲಿ 114 ರನ್ ಗಳಿಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

ಮುಂದಿನ ಸುದ್ದಿ
Show comments