Publish Date: Sat, 10 Oct 2020 (09:10 IST)
Updated Date: Sat, 10 Oct 2020 (09:12 IST)
ದುಬೈ: ಐಪಿಎಲ್ 13 ರಲ್ಲಿ ಇಂದು ಎರಡು ಪಂದ್ಯ ನಡೆಯಲಿದ್ದು, ಮೊದಲ ಪಂದ್ಯ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ಮಧ್ಯೆ ನಡೆಯಲಿದೆ.
ಈಗಾಗಲೇ ಸೋತು ಸುಣ್ಣವಾಗಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಇಂದು ಹೊಸ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ‍್ಯತೆಯಿದೆ. ಕಳೆದ ಪಂದ್ಯದಲ್ಲೇ ಸ್ಪೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ರನ್ನು ಕಣಕ್ಕಿಳಿಸಲು ಪಂಜಾಬ್ ನಿರ್ಧರಿಸಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅನಾರೋಗ್ಯದಿಂದಾಗಿ ಅವರು ಕಣಕ್ಕಿಳಿದಿರಲಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ ವೆಲ್ ರನ್ನು ಕಿತ್ತು ಹಾಕಿ ಕ್ರಿಸ್ ಗೇಲ್ ಗೆ ಅವಕಾಶ ನೀಡುವ ಸಾಧ‍್ಯತೆಯಿದೆ. ಸೋಲು ತಪ್ಪಿಸಿಕೊಳ್ಳಲು ಹವಣಿಸುತ್ತಿರುವ ರಾಹುಲ್ ಪಡೆ ಇಂದು ಮತ್ತಷ್ಟು ಬದಲಾವಣೆ ಮಾಡಿದರೂ ಅಚ್ಚರಿಯಿಲ್ಲ. ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.