Publish Date: Thu, 22 Oct 2020 (09:56 IST)
Updated Date: Thu, 22 Oct 2020 (09:58 IST)
ದುಬೈ: ಐಪಿಎಲ್ 13 ರ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್, ಸನ್ ರೈಸರ್ಸ್ ಹೈದರಾಬಾದ್ ಪರಸ್ಪರ ಮುಖಾಮುಖಿಯಾಗಲಿದೆ.
ಎರಡೂ ತಂಡಗಳು ಪ್ಲೇ ಆಫ್ ಹಂತಕ್ಕೇರಲು ಎಲ್ಲಾ ಪಂದ್ಯಗಳನ್ನೂ ಗೆಲ್ಲುವ ಅನಿವಾರ್ಯತೆಯಲ್ಲಿವೆ. ಆದರೆ ಈ ಪೈಕಿ ಕಳೆದ ಪಂದ್ಯ ಸೋತಿರುವ ರಾಜಸ್ಥಾನ್ ಮತ್ತು ಹೈದರಾಬಾದ್ ಗೆ ಈ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. ರಾಜಸ್ಥಾನ್ ಇದುವರೆಗೆ 10 ಪಂದ್ಯಗಳನ್ನಾಡಿ ಅಂಕಪಟ್ಟಿಯಲ್ಲಿ 6 ನೇ ಸ್ಥಾನದಲ್ಲಿದೆ. ಆದರೆ ಹೈದರಾಬಾದ್ 9 ಪಂದ್ಯಗಳನ್ನಾಡಿ 7 ನೇ ಸ್ಥಾನದಲ್ಲಿದೆ. ಈ ಪಂದ್ಯವನ್ನು ಹೈದರಾಬಾದ್ ಗೆದ್ದರೆ ಅದರ ಪ್ಲೇ ಆಫ್ ಕನಸು ಜೀವಂತವಾಗಿರುತ್ತದೆ. ರಾಜಸ್ಥಾನ್ ಸೋತರೆ ಪ್ಲೇ ಆಫ್ ಕನಸು ಭಗ್ನವಾಗಲಿದೆ. ಹೀಗಾಗಿ ಎರಡೂ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಸಂಜೆ 7.30 ರಿಂದ ಸ್ಟಾರ್ ಸ್ಪೋರ್ಟ್ಸ್ ನಲ್ಲಿ ಪಂದ್ಯದ ನೇರಪ್ರಸಾರ ವೀಕ್ಷಿಸಬಹುದು.