Select Your Language

Notifications

webdunia
webdunia
webdunia
webdunia

ಐಪಿಎಲ್ 13: ರಾಜಸ್ಥಾನ್, ಮುಂಬೈಗೆ ಗೆಲುವಿನ ಮಾಲೆ

ಐಪಿಎಲ್ 13: ರಾಜಸ್ಥಾನ್, ಮುಂಬೈಗೆ ಗೆಲುವಿನ ಮಾಲೆ
ದುಬೈ , ಸೋಮವಾರ, 12 ಅಕ್ಟೋಬರ್ 2020 (08:59 IST)
ದುಬೈ: ಐಪಿಎಲ್ 13 ರ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ್ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಗಳಿಸಿದೆ.


ಮೊದಲ ಪಂದ್ಯದಲ್ಲಿ ಹೈದರಾಬಾದ್-ರಾಜಸ್ಥಾನ್ ಮುಖಾಮುಖಿಯಾಗಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಹುಲ್ ತೆವಾತಿಯಾ (45), ಪರಾಗ್ (42)  ಭರ್ಜರಿ ಬ್ಯಾಟಿಂಗ್ ನೆರವಿನಿಂದ 19.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 163 ರನ್ ಗಳಿಸಿ ಗೆಲುವು ಕಂಡಿತು.

ಎರಡನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 5 ವಿಕೆಟ್ ಗಳ ಗೆಲುವು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು. ಶಿಖರ್ ಧವನ್ ಅಜೇಯ 69 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ ಮುಂಬೈ 19.4 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 166 ರನ್ ಗಳಿಸುವ ಮೂಲಕ ಗೆಲುವು ದಾಖಲಿಸಿತು.

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಬ್ಯಾಟಿಂಗ್ ಅನುಕರಿಸಬೇಡಿ: ತಂಡಕ್ಕೆ ಖಡಕ್ ಎಚ್ಚರಿಕೆ ನೀಡಿದ ಧೋನಿ